ಬೆಂಗಳೂರು: ರಾಮೇಶ್ವರ ಕೆಫೆ ಬಾಂಬ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಘಟನೆಯಲ್ಲಿ ಇಬ್ಬರು ಭಾಗವಹಿಸಿರುವ ಬಗ್ಗೆ ಎನ್‌ಐಎ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.
ಇದಲ್ಲದೇ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಪಟ್ಟತೆ ಭಾಗಿಯಾಗಿದ್ದವರೇ ಇದರಲ್ಲೂಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಘಟನೆ ಸಂಬಂಧಪಟ್ಟಂಥೆ ಎನ್‌ಐಎ ಅಧಿಕಾರಿಗಳು ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಹಲವುಮಹತ್ವದ ಮಾಹಿತಿಗಳನ್ನುಕೂಡ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.