ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ NIA ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಇದೀಗ ಐದನೇ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿಯ ಶೋಯೆಬ್ ಅಹಮದ್ ಮಿರ್ಜಾ ಅಲಿಯಾಸ್ ಚೋಟು (35) ಎನ್ನುವವನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಎಲ್ಇಟಿ ಪಿತೂರಿ ಕೇಸ್ ನಲ್ಲೂ ಶೋಯಬ್ ಅಹಮದ್ ಶಿಕ್ಷೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದೆ.