ಮಂಗಳೂರು: ಪವಿತ್ರ ರಂಜಾನ್ ಮಾಸದ ಚಂದ್ರನ ದರ್ಶನ ಮಂಗಳವಾರ ಆಗಲಿದೆ ಎನ್ನಲಾಗುತ್ತಿದೆ. ಹೀಗಾಗಿ ಮಾರ್ಚ್.12ರ ಮಂಗಳವಾರದ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತಾಚರಣೆ ಆರಂಭಗೊಳ್ಳಲಿದೆ.

ಈ ಕುರಿತಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಅವರು ಮಾಹಿತಿ ನೀಡಿದ್ದು, ಮಂಗಳವಾರದ ನಾಳೆ ಚಂದ್ರ ದರ್ಶನವಾಗುವ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತ ಆಚರಣೆ ಮಾಡಲಾಗುತ್ತದೆ ಎಂದರು.

ಈ ಹಿನ್ನಲೆಯಲ್ಲಿ ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಕೇರಳ, ಕಾಸರಗೂಡು ಸೇರಿದಂತೆ ರಾಜ್ಯಾಧ್ಯಂತ ನಾಳೆಯಿಂದ ಪವಿತ್ರ ರಂಜಾನ್ ಮಾಸದ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ. ನಾಳೆಯಿಂದ ಒಂದು ತಿಂಗಳವರೆಗೆ ಮುಸ್ಲೀಂ ಬಾಂಧವರು ಪವಿತ್ರ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡಲಿದ್ದಾರೆ.

ದೇಶಾದ್ಯಂತ ‘CAA’ ಜಾರಿ ಸಂಬಂಧ ‘ಕೇಂದ್ರ ಸರ್ಕಾರ’ದಿಂದ ಅಧಿಸೂಚನೆ ಪ್ರಕಟ | CAA Rules

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘2000 ವೇತನ’ ಹೆಚ್ಚಳ- ಸಿಎಂ ಭರವಸೆ

Share.
Exit mobile version