ಬೆಂಗಳೂರು : ಪವಿತ್ರ ರಂಜಾನ್ ತಿಂಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಶಾಲೆಗಳು ಉರ್ದು ಶಾಲೆಗಳ ವಿದ್ಯಾರ್ಥಿಗಳಿಗೆ ರಂಜಾನ್ ತಿಂಗಳನ್ನು ಆಚರಿಸಲು ಅನುಕೂಲವಾಗುವಂತೆ ಶಾಲಾ ಸಮಯವನ್ನು ಬದಲಾವಣೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಹೊರಡಿಸಿದ ಸುತ್ತೋಲೆಯಲ್ಲಿ ರಂಜಾನ್ ತಿಂಗಳಲ್ಲಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲಾ ಶಾಲೆಗಳ ಸಮಯವನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:45 ಕ್ಕೆ ಬದಲಾಯಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಾಲೆಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
BIG NEWS : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ʻಶೃಂಗೇರಿ ಪೋಕ್ಸೋʼ ಪ್ರಕರಣ : ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟ
ಉಲ್ಲೇಖಿತ-1ರ ಸುತ್ತೋಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ.
ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ:31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ( Standing Order ) ನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ.