ರಾಂಚಿಯಲ್ಲಿ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಸ್ಥಳೀಯರ ಆಕ್ರೋಶಕ್ಕೆ ಮನೆ, ಕಾರು ಧ್ವಂಸ – Kannada News Now


India

ರಾಂಚಿಯಲ್ಲಿ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಸ್ಥಳೀಯರ ಆಕ್ರೋಶಕ್ಕೆ ಮನೆ, ಕಾರು ಧ್ವಂಸ

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ಸುಖದೇವ್ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ, ಖ್ಯಾತ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

ಅತ್ಯಾಚಾರ ಆರೋಪಿ ಮತ್ತು ಮಗುವಿನ ಕುಟುಂಬ ಸದಸ್ಯರು ಬಾಡಿಗೆಗೆ ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು.ಶುಕ್ರವಾರ ರಾತ್ರಿ ಬಾಲಕಿ ಮನೆಯಲ್ಲಿ ಒಂಟಿಯಾಗಿರುವುದನ್ನು ಕಂಡಿದ್ದ ಅರವಿಂದ್, ಚಾಕೊಲೇಟ್ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ನಂತರ ಬಾಲಕಿ ಮೂರ್ಛೆ ಹೋದಾಗ ಆರೋಪಿ ಆಕೆಯನ್ನು ಬಿಟ್ಟು ಓಡಿಹೋಗಿದ್ದಾನೆ. ವಿಷಯ ತಿಳಿದ ಬಾಲಕಿಯ ಕುಟುಂಬಸ್ಥರು ಸುಖದೇವ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕೋಪಗೊಂಡ ಸ್ಥಳೀಯರು ಆರೋಪಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಾರು ಮತ್ತು ಮನೆಯನ್ನು ಧ್ವಂಸಗೊಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಜನರನ್ನು ಸಮಾಧಾನಪಡಿಸಿದರು. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.
error: Content is protected !!