ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ‘ಪೇ ಸಿಎಂ ಪೋಸ್ಟರ್’ ವಿವಾದ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಹೌದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತ್ ಜೋಡೋ ಯಾತ್ರೆ ಸಭೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕೈ ನಾಯಕರಿದ್ದು, ಮುಂದಿನ ನಡೆ ಬಗ್ಗೆ ಕೈ ನಾಯಕರು ಚರ್ಚೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BIG NEWS: ತುಮಕೂರಿನಲ್ಲಿ ದೇವಸ್ಥಾನ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ; ಮಹಿಳೆ ಸೇರಿ ಇಬ್ಬರ ಹತ್ಯೆ
‘