ನವದೆಹಲಿ : ವಿಶ್ವದ ಅನೇಕ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾದ ಬೆನ್ನಲ್ಲೆ ದೇಶದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್ ಧರಿಸುವುದು, ಸ್ನಾನಿಟೈಸರ್ ಬಳಕೆ ಸೇರಿದಂತೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಕೋವಿಡ್ ಪರೀಕ್ಷೆ ಸೇರಿದಂತೆ ಅನೇಕ ಕ್ರಮಗಳನ್ನು ಕೇಂದ್ರ ಆರೋಗ್ಯ ಸಚಿವರು ಕೈಗೊಂಡಿದ್ದಾರೆ.
ಸಂಸತ್ತಿನಲ್ಲಿ ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಕುರಿತಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿವವರಿಸುತ್ತಿದ್ದಾರೆ. ಇದೇ ವೇಳೆ ಅಂತಾರಾಷ್ಟ್ರೀಯ ಪ್ರಯಾಣಿಕರ ಯಾದೃಚ್ಛಿಕ ಪರೀಕ್ಷೆಯನ್ನು ವಿಮಾನ ನಿಲ್ದಾಣಗಳಲ್ಲಿ ಪ್ರಾರಂಭಿಸಲಾಗಿದೆ ಎಂದು ಸಂಸತ್ತಿಗೆ ತಿಳಿಸಿದರು.