ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ DRI ಅಧಿಕಾರಿಗಳು ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ ತರುಣ್ ರಾಜುನನ್ನು ಅರೆಸ್ಟ್ ಮಾಡಿದ್ದರು. ಇದೀಗ ಮತ್ತೊಂದು ಆರೋಪಿಯನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹೀಗಾಗಿ ಬಂಧಿತರ ಸಂಖ್ಯೆ 3ಕ್ಕೆ ಏರಿದೆ.
ಆರೋಪಿಯನ್ನು ಬಂಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ಮಾರ್ಚ್ 29ರ ವರೆಗೆ ಡಿಆರ್‌ಐ ಕಸ್ಟಡಿಗೆ ನೀಡಿ ಆದೇಶಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಹಾಗೂ ತರುಣ್ ರಾಜು ಅವರನ್ನು ಡಿಆರ್‌ಐ ಅಧಿಕಾರಿಗಳು ಈ ಹಿಂದೆ ಬಂಧಿಸಿದ್ದರು. ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.