ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಳ್ಳಕೆರೆ ಸಿಪಿಐ ಉಮೇಶ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಳು. ಇದೀಗ ಈಕೆ ಸೋದರ ಮಾವನ ಮಗನಾಗಿರುವ ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಾವಣಗೆರೆ ಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಲಾಗಿದೆ.
ಆತ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗ ಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ. ಸಿಪಿಐ ಉಮೇಶ್ಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿಯಾಗಿ ಇರುವಂತೆ ಸಿಪಿಐ ಉಮೇಶ್ ಒತ್ತಡ ಹೇರಿದ್ದಾನೆ. ದಾವಣಗೆರೆಯ ನಿವೇಶನ ನಿನಗೆ ಸಿಗದಂತೆ ಮಾಡುತ್ತೇನೆ. ನಿಮ್ಮ ತಂದೆ-ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವುದಾಗಿ ಯುವತಿ ಆರೋಪಿಸಿದ್ದಾಳೆ.
ಕಲಂ 376 ಕ್ಲಾಸ್ (2)(ಞ)(ಟಿ), 323 (ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ಬಳಿಕ ಸಿಪಿಐ ಜಿ.ಬಿ.ಉಮೇಶ್ ನಾಪತ್ತೆಯಾಗಿದ್ದಾನೆ.