ಮೈಸೂರು : ಮೈಸೂರಿನಲ್ಲಿ ಸರಣಿ ಕೊಲೆ ಪ್ರಕರಣಗಳು ನಡೆಯುತ್ತಿದ್ದವು ಅಲ್ಲದೆ 9 ವರ್ಷದ ಬಾಳಿಕೆಯ ಮೇಲೆ ಅತ್ಯಾಚಾರ ಹೆಚ್ಚಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದು ಹಿರಿಯ ಅಧಿಕಾರಿಗಳ ಜೊತೆಗೆ ಈ ಕುರಿತು ಸಭೆ ನಡೆಸಲಿದ್ದಾರೆ.
ಮೈಸೂರಿನ ವರುಣ ಕ್ಷೇತ್ರದ ಶಾಸಕರಾಗಿರುವ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಈ ಕುರಿತು ಸಭೆ ನಡೆಸಲಿದ್ದಾರೆ. ನಾಳೆ ಸಂಜೆ 7:25 ಕ್ಕೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಸರಣಿ ಕೊಲೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಅಧಿಕಾರಿಗಳ ಜೊತೆಗೆ ಮಾಹಿತಿ ಪಡೆದ ನಂತರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಆ ಬಳಿಕ ಬೆಂಗಳೂರಿಗೆ ತೆರಳಿದ್ದಾರೆ.