ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಇಂದು ಎಸ್ಐಟಿ ಅಧಿಕಾರಿಗಳಿಂದ ಶಾಸಕ ಹೆಚ್.ಡಿ ರೇವಣ್ಣ ನಿವಾಸದಲ್ಲಿ ಪಂಚನಾಮೆಯನ್ನು ನಡೆಸಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಈಗಾಗಲೇ ಹೊಳೆನರಸೀಪುರದಲ್ಲಿದ್ದಂತ ಶಾಸಕ ಹೆಚ್.ಡಿ ರೇವಣ್ಣ ಅವರ ನಿವಾಸದಲ್ಲಿ ಸಂತ್ರಸ್ತೆ ಮಹಿಳೆಯೊಂದಿಗೆ ತೆರಳಿ ಪಂಚನಾಮೆಯನ್ನು ನಡೆಸಿದ್ದರು.

ಇಂದು ಎಸ್ಐಟಿ ಅಧಿಕಾರಿಗಳು ಈ ಪ್ರಕ್ರಿಯೆ ಮುಂದುವರೆಸಿದ್ದಾರೆ. ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ನಿವಾಸಕ್ಕೆ ಎರಡು ಕಾರುಗಳಲ್ಲಿ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದಾರೆ.

ಬಸವನಗುಡಿಯಲ್ಲಿರುವಂತ ಶಾಸಕ ಹೆಚ್.ಡಿ ರೇವಣ್ಣ ಅವರ ನಿವಾಸಕ್ಕೆ 2 ವಾಹನಗಳಲ್ಲಿ 10ಕ್ಕೂ ಹೆಚ್ಚು ಎಸ್ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರ ನಿವಾಸದಲ್ಲಿ ಪಂಚನಾಮೆ ನಡೆಸುತ್ತಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ 3ನೇ ಎಫ್ಐಆರ್ ದಾಖಲು

ಮೇ 8 ರಂದು ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಎಫ್‍ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಎಫ್ಐಆರ್ ನಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ಐಪಿಸಿ ಸೆಕ್ಷನ್ 376(2)(ಎನ್) (ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ), 376(2)(ಕೆ) (ಮಹಿಳೆ ಮೇಲೆ ಪದೇ ಪದೇ ಅತ್ಯಚಾರ), 354(ಎ) (ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ), 354(ಬಿ) (ಬಟ್ಟೆ ಹಿಡಿದು ಎಳೆದಾಡಿದ ಆರೋಪ), 354(ಸಿ) (ಖಾಸಗಿ ಚಿತ್ರಗಳನ್ನ ಸೆರೆ ಹಿಡಿದು ವೀಕ್ಷಣೆ ಮಾಡುವುದು, ಆಕೆಯ ಒಪ್ಪಿಗೆ ಇಲ್ಲದೆ ಪ್ರಸಾರ ಮಾಡುವುದು), 506 (ಬೆದರಿಕೆ ಹಾಕುವುದು), ಹೀಗೆ ಮೂರನೇ ಎಫ್‍ಐಆರ್ ನಲ್ಲಿ ಕಠಿಣ ಸೆಕ್ಷನ್ ಗಳನ್ನ ಎಸ್‍ಐಟಿ ಹಾಕಿದ್ದಾರೆ ಎನ್ನಲಾಗುತ್ತಿದೆ.

ಕಲಬುರ್ಗಿಯಲ್ಲಿ ರಾಜಕೀಯ ವೈಷಮ್ಯಕ್ಕೆ ವ್ಯಕ್ತಿಯ ಹತ್ಯೆ : ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ಕೊಲೆ

ಮುಸ್ಲಿಮರಿಗೆ ಉದ್ಯೋಗ ಮೀಸಲಾತಿ ನೀಡಲು ಕಾಂಗ್ರೆಸ್ ಪಿತೂರಿ: ಮೋದಿ

Share.
Exit mobile version