ರಾಮನಗರ : ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಾಗೆ ಜಾಮೀನು ಮಂಜೂರು ಮಾಡಿತ್ತು. ಇಂದು ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಯಾದ ತಕ್ಷಣ ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯ ಪೊಲೀಸರು ಮುನಿರತ್ನ ಅವರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ.
ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಮನಗರ ಠಾಣೆಯ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿ ಇದೀಗ ಕಗ್ಗಲಿಪುರ ಠಾಣೆಗೆ ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ.
ಈಗಾಗಲೇ ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನಗೆ ಬೆಂಗಳೂರಿನ 84ನೇ ಸಿಸಿಎಚ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇದರ ಬೆನ್ನಲ್ಲೇ 40 ವರ್ಷದ ಮಹಿಳೆ, ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ ಬಳಿಕ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣದಿಂದ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.