ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ನೀಡಿದೆ.

ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು.

ಸಿಐಡಿ ದಾಖಲಿಸಿರುವ ಎರಡನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.

ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್‌ಐಆರ್​ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ ಸಲ್ಲಿಸಲಿ ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.

Share.
Exit mobile version