ಹಾಸನ : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ.
ಜೂನ್.5ರಂದು ಹಾಸನ ಜಿಲ್ಲಾ ನ್ಯಾಯಾಲಯವು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಆ ಬಳಿಕ ಜಾಮೀನು ನೀಡೋದಕ್ಕೆ ನಿರಾಕರಿಸಿತ್ತು.
ಈ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ನ್ಯಾಯಪೀಠವು, ಜಾಮೀನು ಮಂಜೂರು ಮಾಡಲಾಗಿತ್ತು.
ಇಂದು ಅತ್ಯಾಚಾರ ಆರೋಪ ಕೇಸಲ್ಲಿ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಂತ ವಕೀಲ ದೇವಾರಾಜೇಗೌಡ ಅವರನ್ನು, ಕೋರ್ಟ್ ಜಾಮೀನಿನ ಹಿನ್ನಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಅನಂತ್ ಅಂಬಾನಿ ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುವಿಗೆ ತಲಾ1 ಲಕ್ಷ ರೂ ವಿತರಣೆ
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ ಪೊಣಚ್ಚ ಮತ್ತು ಭುವನ್ ಪೊನ್ನಣ್ಣ | Actress Harshika Poonacha