ರಾಯಚೂರು: ಒಂದೆಡೆ ಎಸ್ಐಟಿ ಅಧಿಕಾರಿಗಳು ಅತ್ಯಾಚಾರ ಆರೋಪ ಸಂತ್ರಸ್ತೆಯರನ್ನು ಹೊಳೆನರಸೀಪುರದಲ್ಲಿನ ಹೆಚ್.ಡಿ ರೇವಣ್ಣ ಮನೆಗೆ ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಮತ್ತೊಂದೆಡೆ ಹೆಚ್.ಡಿ ರೇವಣ್ಣ ಬಂಧನದ ಸುಳಿವನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ನೀಡಿದ್ದಾರೆ.
ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸೋ ಪ್ರಮೇಯವೇ ಇಲ್ಲವೆಂದರು.
ಹೆಚ್.ಡಿ ರೇವಣ್ಣ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂಜೆ 5.30ರ ಒಳಗಾಗಿ ಎಸ್ಐಟಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು. ಇಲ್ಲದಿದ್ದರೇ ತನಿಖಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ವಿಚಾರಣೆಗೆ ಹಾಜರಾಗದಿದ್ರೇ ಖಡಾಖಂಡಿತ ಕ್ರಮವಾಗುತ್ತದೆ ಎಂಬುದಾಗಿ ಹೇಳಿದರು. ಈ ಮೂಲಕ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಇಂದು ಎಸ್ಐಟಿ ಅಧಿಕಾರಿಗಳು ಬಂಧಿಸೋ ಸುಳಿವು ನೀಡಿದರು.