ಉಡುಪಿ : ಅಮಲು ಪದಾರ್ಥ ನೀಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಮಬಂಧಿಸಿದಂತೆ ಮೂರನೇ ಆರೋಪಿ ಅಭಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಎ1 ಆರೋಪಿ ಅಲ್ತಾಫ್ ಗೆ ಅಭಯ್ ಮಾದಕ ವಸ್ತು ಕೊಟ್ಟಿರುವುದಲ್ಲದೇ ಕೃತ್ಯ ಎಸಗಿದ ಬಳಿಕ ಆತನಿಗೆ ತಪ್ಪಿಸಿಕೊಳ್ಳಲು ಸಹಕರಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಇಂದು ಪ್ರಕರಣದ ಆರೋಪಿ ಅಭಯ್ ನನ್ನು ಕೋರ್ಟ್ ಮುಂದೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆದುಕೊಂಡು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.