ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು, ಪ್ರಜ್ವಲ್ ರೇವಣ್ಣ ಅವರು ಹಿಂಪಡೆದಿದ್ದಾರೆ.
ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಸೆಷನ್ಸ್ ಕೋರ್ಟ್ ನಲ್ಲೇ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಿತು.
ಈ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ಪ್ರಜ್ವಲ್ ರೇವಣ್ಣ ಪರ ವಕೀಲರು ಹಿಂಪಡೆದರು. ಈ ಬಳಿಕ ಸೆಷನ್ಸ್ ಕೋರ್ಟ್ ನಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸೋ ಸಾಧ್ಯತೆ ಇದೆ.
ಅಂದಹಾಗೇ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಇದ್ದಾರೆ.
ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ: ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ