ಕೊಪ್ಪಳ: ಮಹಿಳೆಯ ಮೇಲಿನ ಅತ್ಯಾಚಾರ, ವ್ಯಕ್ತಿಯೊಬ್ಬನ ಕೊಲೆಯಂತಹ ಘಟನೆಗಳು ಸಣ್ಣ ಘಟನೆಗಳಾಗಿದ್ದಾವೆ ಎಂಬುದಾಗಿ ಸಂಸದ ರಾಜಶೇಖರ್ ಹಿಟ್ನಾಳ್ ಹೇಳಿದ್ದಾರೆ. ಆ ಮೂಲಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳ ಬಗ್ಗೆ ಲಘುವಾಗಿ ಮಾತನಾಡಿ, ಹೊಸ ವಿವಾದವನ್ನು ಸೃಷ್ಠಿಸಿದ್ದಾರೆ.
ಕೊಪ್ಪಳದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಏರ್ಪಡಿಸಿದ್ದಂತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು, ಜಿಲ್ಲೆಯ ಸಾಣಾಪುರದಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿತ್ತು. ಈ ಸಣ್ಣ ಘಟನೆಯನ್ನು ಮಾಧ್ಯಮಗಳು ದೊಡ್ಡದಾಗಿ ವೈಭವೀಕರಿಸಿದ್ದವು. ಇದರಿಂದ ಕೊಪ್ಪಳದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂಬುದಾಗಿ ಹೇಳಿದ್ದಾರೆ.
ಕೊಪ್ಪಳದ ಸಾಣಾಪುರದಲ್ಲಿ ನಡೆದಿದ್ದಂತ ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಮಾಧ್ಯಮಗಳು ವೈಭವೀಕರಿಸಿ, ಸುದ್ದಿ ಮಾಡಿದ್ದರಿಂದಾಗಿ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟೇ ಬಿದ್ದಿದೆ. ಶೇ.50ರಷ್ಟು ಪ್ರವಾಸಿಗರ ಸಂಖ್ಯೆಯೇ ಇಳಿಕೆಯಾಗಿದೆ ಎಂದಿದ್ದಾರೆ.
ಕಳೆದ ಮಾರ್ಚ್ ನಲ್ಲಿ ಕೊಪ್ಪಳದ ಸಾಣಾಪುರದಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ ನಡಿತ್ತು. ಒಡಿಶಾ ಪ್ರವಾಸಿಗ ಬಿಬಾಶ್ ಎಂಬಾತನ ಮೃತದೇಹವು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಈ ಎರಡು ಕೃತ್ಯವನ್ನು ಮದ್ಯದ ಅಮಲಿನಲ್ಲಿ ನಡೆಸಲಾಗಿದೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದರು. ಈ ವಿಷಯ ಪ್ರಸ್ತಾಪಿಸಿರುವಂತ ಸಂಸದ ರಾಜಶೇಖರ್ ಹಿಟ್ನಾಳ್ ಅವರು, ಅತ್ಯಾಚಾರ, ಕೊಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆ ಬಂದ್
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








