ಮೈಸೂರು: ನೈಋತ್ಯ ರೈಲ್ವೆ, ಮೈಸೂರು ವಿಭಾಗದ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯ ತ್ವರಿತ ಹಾಗೂ ಪ್ರಾಮಾಣಿಕ ಕಾರ್ಯಾಚರಣೆಯಿಂದ ಒಬ್ಬ ಮಹಿಳಾ ಪ್ರಯಾಣಿಕರಿಗೆ ₹1,49,465/- ಮೌಲ್ಯದ ಚಿನ್ನಾಭರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗೊಂಡ ವ್ಯಾನಿಟಿ ಬ್ಯಾಗ್ ಅನ್ನು ಯಶಸ್ವಿಯಾಗಿ ಮರಳಿಸಿದ್ದಾರೆ.
ದಿನಾಂಕ 21 ಮೇ 2025 ರಂದು, ಕಡೂರು ನಿವಾಸಿ ತೇಜಾ ಅವರು ರೈಲು ಸಂಖ್ಯೆ 16589 ರಲ್ಲಿ ಕಡೂರು ರೈಲ್ವೆ ನಿಲ್ದಾಣದಲ್ಲಿ ಇಳಿಯುವಾಗ ತಮ್ಮ ಬ್ಯಾಗ್ ಅನ್ನು ಆಕಸ್ಮಿಕವಾಗಿ ಬಿಟ್ಟುಹೋಗಿದ್ದರು. ರೈಲ್‌ಮದದ್ ದೂರನ್ನು ಸ್ವೀಕರಿಸಿದ ತಕ್ಷಣ, ಆರ್‌ಪಿಎಫ್ ಎಸ್ಕಾರ್ಟ್ ತಂಡವು ತಕ್ಷಣವೇ ರೈಲಿನಲ್ಲಿ ಹುಡುಕಾಟ ನಡೆಸಿ ಬ್ಯಾಗ್ ಅನ್ನು ಪತ್ತೆಹಚ್ಚಿದ್ದು. ಆ ಬ್ಯಾಗ್ ಅನ್ನು ದಾವಣಗೆರೆಯ ಆರ್‌ಪಿಎಫ್ ಪೋಸ್ಟ್‌ಗೆ ಹಸ್ತಾಂತರಿಸಲಾಯಿತು.
ಸೂಕ್ತ ಪರಿಶೀಲನೆಯ ನಂತರ, 15 ಗ್ರಾಂ ಚಿನ್ನಾಭರಣ ಮತ್ತು ಎರಡು ಐಫೋನ್ ಚಾರ್ಜರ್‌ಗಳನ್ನು ಒಳಗೊಂಡ ವಸ್ತುಗಳನ್ನು ದಿನಾಂಕ 22 ಮೇ 2025 ರಂದು ಮಾಲೀಕರಿಗೆ ಹಿಂದಿರುಗಿಸಲಾಯಿತು.
ಮೈಸೂರು ವಿಭಾಗದ ಹಿರಿಯ ವಿಭಾಗೀಯ ಆಯುಕ್ತ, ಆರ್‌ಪಿಎಫ್, ಸ್ಯಾಮ್ ಪ್ರಸಾಂತ್ ಜೆ.ಆರ್, ಆಪರೇಷನ್ “ಅಮಾನತ್” ಅಡಿಯಲ್ಲಿ ತಂಡದ ಪ್ರಾಮಾಣಿಕ ಕರ್ತವ್ಯವನ್ನು ಶ್ಲಾಘಿಸಿದರು.
ಈ ವಿಶೇಷ ಕಾರ್ಯಾಚರಣೆಯಡಿ ಪ್ರಯಾಣಿಕರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಗುರಿಯನ್ನು ಹೊಂದಿದೆ. ಅವರು ಇದೇ ಸಂದರ್ಭದಲ್ಲಿ 2024-25ನೇ ಆರ್ಥಿಕ ವರ್ಷದಲ್ಲಿ ಆರ್‌ಪಿಎಫ್ ಸಿಬ್ಬಂದಿ 197 ಕಳೆದುಹೋದ ಸಾಮಾನುಗಳನ್ನು ಮರಳಿಸಿದ್ದು, ₹52.62 ಲಕ್ಷ ಮೌಲ್ಯದ ವಸ್ತುಗಳನ್ನು ಮರಳಿಸಿದ್ದಾರೆ ಎಂದು ತಿಳಿಸಿದರು.
ಪ್ರಯಾಣಿಕರು ಆರ್‌ಪಿಎಫ್‌ನ ಸತ್ಯನಿಷ್ಠೆ ಮತ್ತು ತ್ವರಿತ ಸ್ಪಂದನೆಗಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ಕುವೆಂಪು ವಿವಿ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ: ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ: ಪ್ರೊ.ಗೋಪಿನಾಥ್
BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ