ಮಂಡ್ಯ : ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕ ಶಿಕ್ಷಕ, ಆರೋಪಿ ಕಾಂತ್ ರಾಜ್ (55) ನನ್ಜು ಗಲ್ಲಿಗೇರಿಸಲು ಭಾರಿ ಆಗ್ರಹ ವ್ಯಕ್ತವಾಗಿದೆ.
ಮಂಗಳವಾರ ಟ್ಯೂಷನ್ಗೆ ಬಂದ ಬಾಲಕಿ (1o) ಮೇಲೆ ಕಾಂತರಾಜು ಅತ್ಯಾಚಾರವೆಸಗಿದ್ದಾನೆ. ನಂತರ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯ ಕತ್ತು ಹಿಸುಕಿ, ಬಳಿಕ ರಾಡಿನಿಂದ ತಲೆಯ ಭಾಗಕ್ಕೆ ಹೊಡೆದು ಹತ್ಯೆಗೈದಿದ್ದಾನೆ.
ಕೊಲೆ ನಂತರ ನಿರ್ಮಾಣ ಹಂತದ ಮನೆಯ ಸಂಪ್ಗೆ ಮೃತದೇಹ ಹಾಕಿ ಪರಾರಿಯಾಗಿದ್ದನು. ನಂತರ ಬಾಲಕಿಯ ಕುಟುಂಬಸ್ಥರ ಜೊತೆ ಸೇರಿ ಆಕೆಗಾಗಿ ಹುಡುಕಾಟ ನಡೆಸಿದ್ದಾನೆ. ಅಲ್ಲದೇ ಪೊಲೀಸರು ಬಂದಾಗಲೂ ಸ್ಥಳದಲ್ಲೇ ಇದ್ದ ಕಾಂತರಾಜು ತನಗೇನು ಗೊತ್ತಿಲ್ಲ ಎಂಬಂತೆ ನಾಟಕ ಮಾಡಿದ್ದಾನೆ. ನಂತರ ಈ ಪ್ರಕರಣಕ್ಕೆ ಸಂಬಂಧ ಕಾಂತರಾಜು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಬಾಲಕಿಯನ್ನು ಟ್ಯೂಷನ್ ಗೆ ಕರೆಸಿಕೊಂಡ ಶಿಕ್ಷಕ ನಂತರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಭೀತಾಗಿದೆ. ಬಂಧಿತ ಶಿಕ್ಷಕನನ್ನು ಕಾಂತ್ ರಾಜ್ ಎಂದು ಗುರುತಿಸಲಾಗಿದೆ. ಟ್ಯೂಷನ್ ಗೆ ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಪೋಷಕರಿಗೆ ಗೊತ್ತಾದರೆ ಅಪಾಯ ಎಂದು ಭಾವಿಸಿದ ಈತ ಬಾಲಕಿ ತಲೆಗೆ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ , ಬಳಿಕ ಸಂಪ್ ಗೆ ಎಸೆದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಐಪಿಸಿ 302 ಹಾಗೂ ಪೋಕ್ಸೋ ಕಾಯಿದೆಯಡಿ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಜನರು ಆರೋಪಿ ಕಾಂತ್ ರಾಜ್ ನನ್ಜು ಗಲ್ಲಿಗೇರಿಸಲು ಭಾರಿ ಆಗ್ರಹ ವ್ಯಕ್ತಪಡಿಸಿದ್ದಾರೆ.
ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿತ್ತು. ಮಂಗಳವಾರ ಬೆಳಗ್ಗೆ ಟ್ಯೂಷನ್ ಗಾಗಿ ಮನೆಯಿಂದ ಹೋಗಿದ್ದ ವಿದ್ಯಾರ್ಥಿನಿ ಬಳಿಕ ಮನೆಗೆ ವಾಪಸ್ ಬಂದಿರಲಿಲ್ಲ. ನಂತರ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಕಟ್ಟಡದ ಸಮೀಪದಲ್ಲಿ ಪರಿಶೀಲಿಸಿದಾಗ ನೀರಿನ ಸಂಪ್ ಒಳಗೆ ಬಾಲಕಿಯ ಶವ ಪತ್ತೆಯಾಗಿತ್ತು.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ, ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದಿದ್ದಾರೆ.
ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ.
ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ. 1/2
— Siddaramaiah (@siddaramaiah) October 13, 2022
BIG NEWS: ಉತ್ತರ ಕೆರೊಲಿನಾದಲ್ಲಿ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸೇರಿ ಐದು ಮಂದಿ ಸಾವು, ಆರೋಪಿ ಅರೆಸ್ಟ್