ತುಮಕೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿತ್ತು. ಅಲ್ಲದೇ ಡಿವೈಎಸ್ಪಿ ರಾಸಲೀಲೆ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ತುಮಕೂರಿನ ಮಧುಗಿರಿ ಡಿವೈಎಸ್ಪಿಯನ್ನು ಅಮಾನತುಗೊಳಿಸಿ ಐಜಿ ಮತ್ತು ಐಜಿಪಿ ಆದೇಶಿಸಿದ್ದಾರೆ.
ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿತ್ತು.
ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾನೆ. ಗೃಹ ಸಚಿವ ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಇದು ಇಡೀ ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತಹ ಘಟನೆಯಾಗಿತ್ತು.
ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ಬಳಿಕ ವಾಟ್ಸ್ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವಂತ ಡಿಜಿ ಮತ್ತು ಐಜಿಪಿಯವರು ತುಮಕೂರಿನ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ಬಗ್ಗೆ ಮಾಹಿತಿ: ಸಚಿವ ಪ್ರಿಯಾಂಕ್ ಖರ್ಗೆ
BIG NEWS: ಸಾಗರದ ‘ಉಳ್ಳೂರು ವ್ಯಾಪ್ತಿ’ಯಲ್ಲಿ ‘ಸಾಗುವಾನಿ ಮರ’ಗಳ ಕಳ್ಳಸಾಗಾಟ: ಕಣ್ಮುಚ್ಚಿ ಕುಳಿತ ‘ಅರಣ್ಯ ಇಲಾಖೆ’