ಸುಭಾಷಿತ :

Wednesday, January 29 , 2020 9:38 PM

ಕಿರಿಕ್ ಬೆಡಗಿಗೆ ‘ಐಟಿ ಶಾಕ್’ : ವಿರಾಜಪೇಟೆ ನಿವಾಸದಲ್ಲಿ ನಟಿ ರಶ್ಮಿಕಾ ಮಂದಣ್ಣ ವಿಚಾರಣೆ ಆರಂಭ


Thursday, January 16th, 2020 9:29 pm

ಮಡಿಕೇರಿ : ಐಟಿ ವಿಚಾರಣೆ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರು ಗ್ರಾಮದಲ್ಲಿರುವ ತಮ್ಮ ನಿವಾಸಕ್ಕೆ ಆಗಮನವಾಗಿದ್ದು, ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣ ಅವರ  ವಿಚಾರಣೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣರಿಗೆ ಇಂದು ಬೆಳ್ಳಂಬೆಳಗ್ಗೆಯೇ ಐಟಿ ಅಧಿಕಾರಿಗಳು ಶಾಕ್ ನೀಡಿದ್ದರು. ವಿರಾಜಪೇಟೆ ಸಮೀಪದ ಕಕ್ಲೂರಿನ ನಿವಾಸದಲ್ಲಿ ಇಂದು ದಾಳಿ ನಡೆಸಿರುವ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಅಧಿಕಾರಿಗಳು ದಾಖಲೆ ಪತ್ರಗಳನ್ನು ಜಾಲಾಡಿದ್ದರು. ದಾಳಿಯ ವೇಳೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದ್ದು, ತೆರಿಗೆ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಅವರು ಟಾಲಿವುಡ್ ಹಾಗೂ ಕಾಲಿವುಡ್ ಸಿನಿಮಾಗಳಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ದೊಡ್ಡ ಪ್ರಮಾಣದ ಸಂಭಾವನೆಯನ್ನು ನಗದು ರೂಪದಲ್ಲಿ ಪಡೆದಿದ್ದಾರೆ. ಈ ಮೂಲಕ ತೆರಿಗೆ ವಂಚಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ನಡುವೆ ಇಂದು ನಡೆದ ಐಟಿ ದಾಳಿಯ ವೇಳೆ ರಶ್ಮಿಕಾ ಮಂದಣ್ಣ ಮನೆಯಲ್ಲಿ ಇಲ್ಲದ ಕಾರಣ ಅವರಿಗೆ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ನೋಟೀಸ್ ನೀಡಿದ್ದರು.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions