ಸುಭಾಷಿತ :

Wednesday, January 29 , 2020 9:39 PM

Breaking ; 10 ಅಧಿಕಾರಿಗಳ ತಂಡದಿಂದ ‘ಕೊಡಗಿನ ಕುವರಿ’ ರಶ್ಮಿಕಾಗೆ ‘ಐಟಿ ಡ್ರಿಲ್’…!


Thursday, January 16th, 2020 10:01 pm

ಮಡಿಕೇರಿ : ಐಟಿ ವಿಚಾರಣೆ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರು ಗ್ರಾಮದಲ್ಲಿರುವ ತಮ್ಮ ನಿವಾಸಕ್ಕೆ ಧಾವಿಸಿದ್ದು, ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣರನ್ನು ತೀವ್ರ  ವಿಚಾರಣೆಗೊಳಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ತಮ್ಮ ನಿವಾಸಕ್ಕೆ ಬರುತ್ತಿದ್ದಂತೆ ಅವರ ಸುತ್ತಲೂ ಪೊಲೀಸರು ಹಾಗೂ ಅಧಿಕಾರಿಗಳು ಅವರನ್ನು ಕವರ್ ಮಾಡಿ ಮನೆಯೊಳಗೆ ಹೋಗಲು ಅನುವು ಮಾಡಿಕೊಟ್ಟಿದ್ದಾರೆ.

ಸದ್ಯ 10 ಮಂದಿ ಐಟಿ ಅಧಿಕಾರಿಗಳ ತಂಡ ರಶ್ಮಿಕಾ ಅವರನ್ನು ವಿಚಾರಣೆಗೊಳಪಡಿಸುತ್ತಿದೆ, ಇಂದು ಮುಂಜಾನೆ ಅವರ ತಂದೆ ಮದಣನ್ ಮಂದಣ್ಣ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ವಿರಾಜಪೇಟೆ ಸಮೀಪದ ಕಕ್ಲೂರಿನ ನಿವಾಸದಲ್ಲಿ ಇಂದು ದಾಳಿ ನಡೆಸಿರುವ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಅಧಿಕಾರಿಗಳು ದಾಖಲೆ ಪತ್ರಗಳನ್ನು ಜಾಲಾಡಿದ್ದರು. ದಾಳಿಯ ವೇಳೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದ್ದು, ತೆರಿಗೆ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions