ಬೆಂಗಳೂರು: ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ.
ಆಗಸ್ಟ್.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದೆ.
ಸ್ಟೋಗೋ ಉತ್ಸವ (STOGO FEST) 2024 ಮತ್ತು ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ (ಸಿಒಪಿ) ಪ್ರಶಸ್ತಿ 2024
BREAKING : ದೇಶವು ಮತ್ತೊಂದು ಅತ್ಯಾಚಾರವನ್ನು ಕಾಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್