ಬೆಂಗಳೂರು : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು.
ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:-
ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
ಮೆನು ಪಟ್ಟಿಯಿಂದ, “e-Services” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
“e-Ration card” ಲಿಂಕ್ ಮೇಲೆ ಕ್ಲಿಕ್ ಮಾಡಿ.
“Village list” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಈ ಕೆಳಗಿನ ಮಾಹಿತಿಯನ್ನು ಆಯ್ಕೆಮಾಡಿ-
ಜಿಲ್ಲೆ
ತಾಲ್ಲೂಕು
ಗ್ರಾಮ ಪಂಚಾಯತ್
ಗ್ರಾಮ
“ಗೋ” ಬಟನ್ ಕ್ಲಿಕ್ ಮಾಡಿ.
ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.