ಬಳ್ಳಾರಿ : ಅನ್ನಭಾಗ್ಯ ಯೋಜನೆಯಡಿ ಜೂನ್ ತಿಂಗಳ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 14 ಕೆ.ಜಿ ಜೋಳ ಮತ್ತು ಪಿ.ಹೆಚ್.ಹೆಚ್ ಫಲಾನುಭವಿಗಳಿಗೆ 2 ಕೆ.ಜಿ ಜೋಳ ಹಾಗೂ ಎಎವೈ ಪಡಿತರ ಚೀಟಿಗೆ 21 ಕೆ.ಜಿ ಅಕ್ಕಿ ಮತ್ತು ಪಿ.ಹೆಚ್.ಹೆಚ್ ಫಲಾನುಭವಿಗಳಿಗೆ 3 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.
ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿದಾರರು ಹತ್ತಿರದ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
GST Council Meeting: ಅನುಸರಣೆ ಹೊರೆಯನ್ನು ಕಡಿಮೆ ಮಾಡಲು ಹಿಂದಿನ ತೆರಿಗೆ ಸೂಚನೆಗಳ ಮೇಲಿನ ದಂಡವನ್ನು ಮನ್ನಾ