ಸುಭಾಷಿತ :

Monday, March 30 , 2020 12:03 PM

ಪಡಿತರ ಧಾನ್ಯ ಪಡೆಯುವವರೇ ಗಮನಿಸಿ : ಬೆಳಗ್ಗೆ 7 ರಿಂದ ರಾತ್ರಿ 9 ರ ವರಗೆ ಪಡೆಯಲು ಅವಕಾಶ


Thursday, March 26th, 2020 8:55 pm

ಮಡಿಕೇರಿ : ಕೊರೋನಾ ವೈರಸ್ (ಕೋವಿಡ್-19) ಸಂಬಂಧಿಸಿದಂತೆ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಳ್ಳಲು ವಿನಾಯಿತಿ ಇದ್ದು ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆ ವರೆಗೆ ಪಡಿತರವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

ಜೊತೆಗೆ ಹೊರ ಜಿಲ್ಲೆಯ ಪಡಿತರ ಚೀಟಿದಾರರು ಇದ್ದಲ್ಲಿ, ಅವರಿಗೂ ಸಹ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಧಾನ್ಯ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಜನರು ಸರತಿ ಸಾಲಿನಲ್ಲಿ ನಿಲ್ಲದೆ ಒಬ್ಬೊಬ್ಬರಾಗಿ ಅಂತರ ಕಾಯ್ದುಕೊಂಡು ಪಡಿತರ ಆಹಾರ ಧಾನ್ಯ ಪಡೆದುಕೊಳ್ಳುವಂತಾಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ಕೋರಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions