ಮೈಸೂರು: ಜಿಲ್ಲೆಯ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದಂತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದು, ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.
ಮೈಸೂರು ಹೊರ ವಲಯದಲ್ಲಿ ನಿನ್ನೆ ತಡರಾತ್ರಿ ರೇವ್ ಪಾರ್ಟಿ ನಡೆಸಲಾಗಿದೆ. ಈ ವಿಷಯ ತಿಳಿದಂತ ಮೈಸೂರು ಜಿಲ್ಲಾ ಪೊಲೀಸರು ಅಲರ್ಟ್ ಆಗಿ ಪಾರ್ಟಿಯ ಮೇಲೆ ದಾಳಿಯನ್ನು ನಡೆಸಿದ್ದಾರೆ.
ಮೈಸೂರು ಹೆಚ್ಚುವರಿ ಎಸ್ಪಿ ನಾಗೇಶ್, ಡಿವೈಎಸ್ಪಿ ಕರೀಮ್ ನೇತೃತ್ವದಲ್ಲಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಲಾಗಿದೆ. ತಡರಾತ್ರಿ ನಡೆಯುತ್ತಿದ್ದ ಪಾರ್ಟಿಯಲ್ಲಿ ನೂರಾರು ಜನರು ಭಾಗಿಯಾಗಿದ್ದರು ಎನ್ನಲಾಗಿದೆ.
ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಂತ 150ಕ್ಕೂ ಹೆಚ್ಚು ಯುವತಿ, ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆಯನ್ನು ನಡೆಸಿದಂತ ಆರೋಪ ಕೂಡ ಕೇಳಿ ಬಂದಿದೆ.
ಮೈಸೂರು ಹೊರ ವಲಯದ ರೇವ್ ಪಾರ್ಟಿಯಲ್ಲಿ ಭಾಗಿಯಾದವರಿಂದ ತಲಾ 2000 ಹಣವನ್ನು ವಸೂಲಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಪಾರ್ಟಿಯಲ್ಲಿ ಭಾಗಿಯಾದವರ ರಕ್ತದ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಇನ್ನೂ ಮೈಸೂರು ಹೊರವಲಯಲ್ಲಿ ನಡೆದಂತ ರೇವ್ ಪಾರ್ಟಿಯಲ್ಲಿ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ. ಡ್ರಗ್ಸ್ ಸೇವನೆಯ ಬಗ್ಗೆ ಭಾಗಿಯಾಗಿದ್ದವರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ ಎಂಬುದಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
‘ಪ್ರೌಢಶಾಲೆ’ಗಳಲ್ಲಿ ‘ಶಿಕ್ಷಕ’ರಿಗೆ ಹೆಚ್ಚಿನ ಒತ್ತಡ: ಈ ಸಮಸ್ಯೆ ನಿವಾರಿಸುವುದೇ ‘ಶಿಕ್ಷಣ ಇಲಾಖೆ’.?
ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ