ಸುಭಾಷಿತ :

Tuesday, April 7 , 2020 6:28 PM

ಬಿಗ್ ನ್ಯೂಸ್ : ಭೂಗತ ಪಾತಕಿ ರವಿ ಪೂಜಾರಿ ಭಾರತಕ್ಕೆ ಹಸ್ತಾಂತರ


Monday, February 24th, 2020 6:44 am

ಬೆಂಗಳೂರು: ರವಿ ಪೂಜಾರಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದ್ದು, ನಿನ್ನೆ ರಾತ್ರಿ ರವಿ ಪೂಜಾರಿಯನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.

ದಕ್ಷಿಣ ಅಫ್ರಿಕಾದಲ್ಲಿ ಬಂಧಿತನಾಗಿದ್ದ ರವಿಪೂಜಾರಿಯನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದು ಭಾನುವಾರ ರಾತ್ರಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಕಳೆದ ವರ್ಷ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ರವಿ ಪೂಜಾರಿ ಜಾಮೀನಿನ ಮೇಲೆ ಹೊರಬಂದು ತಲೆಮರೆಸಿಕೊಂಡಿದ್ದು, ದಕ್ಷಿಣ ಆಫ್ರಿಕಾದ ಕುಗ್ರಾಮದಲ್ಲಿ ಬಂಧಿತನಾಗಿದ್ದ.

90ರ ದಶಕದಲ್ಲಿ ಭೂಗತ ಲೋಕದಲ್ಲಿ ಲ್ಲಿ ಹೆಸರು ಮಾಡಿದ್ದ ರವಿ ಪೂಜಾರಿ ದುಬೈನಲ್ಲಿ ಇದ್ದುಕೊಂಡು ಆತ ಮುಂಬೈ, ಮಂಗಳೂರು ಮತ್ತು ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ರವಿ ಪೂಜಾರಿ ವಿರುದ್ಧ ನೂರಾರು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿ 26, ಮಂಗಳೂರಿನಲ್ಲಿ 29 ಸೇರಿ ಹಲವು ಠಾಣೆಗಳಲ್ಲಿ ಕೇಸ್​ಗಳು ದಾಖಲಾಗಿವೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions