ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಅಪಾರವಾದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಈ ನಡುವೆ ವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.

ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್ ಬಿಡುಗಡೆಯಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಇದಲ್ಲದೇ ‘ದೃಷ್ಟಿ ಮೀಡಿಯಾ’ ಪ್ರೊಡಕ್ಷನ್‌ನಡಿ ಈ ಚಿತ್ರ ನಿರ್ಮಾಣವಾಗಿದೆ. ಚಿತ್ರದ ರವಿಕೆ ಸಾಂಗ್ ಅನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಮನಸಲಿ ಜೋರು ಕಲರವ ಹಾಡನ್ನು ಮಾನಸ ಹೊಳ್ಳ, ಮತ್ತು ಹಸಿಮನಸಲಿ ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ.

ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಗೀತಾ ಭಾರತಿ ಭಟ್ ಉತ್ತಮ ಅಭಿನಯದೊಂದಿಗೆ ಹಾಡಿಗೆ ಸಖತ್ ಸ್ಟೆಪ್ ಹಾಕಿ ಡ್ಯಾನ್ಸ್ ಮಾಡಿದ್ದಾರೆ. ರವಿಕೆ ಪ್ರಸಂಗ ಸಿನಿಮಾವನ್ನು ಮಾಷ್೯ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ವಿಶಾಲ ಕರ್ನಾಟಕದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆ ಮಾಡಲಾಗುವುದು ಅಂತ ಸಿನಿಮಾ ತಂಡ ತಿಳಿಸಿದೆ. ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಬ್ಲೌಸ್‌ ಹಿನ್ನೆಲೆಯಲ್ಲಿಯೇ ಸಾಗುವ ಈ ಸಿನಿಮಾ ಕೌಟುಂಬಿಕ ಕಥಾ ಹಂದರದ ಜತೆಗೆ ಹಾಸ್ಯ ಮತ್ತು ಉತ್ತಮ ಸಂದೇಶವನ್ನು ಸಮಾಜಕ್ಕೆ ನೀಡಲಿದೆ ಎಂಬುದು ರವಿಕೆ ಪ್ರಸಂಗ ಚಿತ್ರದ ನಿರ್ದೇಶಕ ಸಂತೋಷ್ ಕೊಡೆಂಕೇರಿ ಮಾತು. ಅಂದಹಾಗೆ, ‘ರವಿಕೆ ಪ್ರಸಂಗ’ ಸಿನಿಮಾ ಫೆಬ್ರವರಿ 16ರಂದು ತೆರೆಕಾಣಲಿದೆ. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ

Share.
Exit mobile version