ಮುಂಬೈ: ತಾನು ಹಂಚಿಕೊಳ್ಳುವ ಸಾರ್ವಜನಿಕ ದತ್ತಾಂಶವು ಅಂತರರಾಷ್ಟ್ರೀಯ ಮಾನದಂಡಗಳಿಗೆ ಹೊಂದಿಕೆಯಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತು ಡೇಟಾದ ಗುಣಮಟ್ಟವನ್ನು ಸುಧಾರಿಸುವ ಮಾರ್ಗಗಳನ್ನು ಸೂಚಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI) ಸೋಮವಾರ ಸಮಿತಿಯನ್ನು ರಚಿಸಿದೆ.
10 ಸದಸ್ಯರ ಸಮಿತಿಯ ಅಧ್ಯಕ್ಷತೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಡೆಪ್ಯುಟಿ ಗವರ್ನರ್ ಮೈಕೆಲ್ ಪಾತ್ರಾ ವಹಿಸಲಿದ್ದಾರೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ.
ಸಮಿತಿಯು ನವೆಂಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಅದು ಹೇಳಿದೆ.
ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ