Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ‘ಬೆಂಗಳೂರು ಸಿಟಿ ರೌಂಡ್’ ಹೈಲೈಟ್ಸ್ | Siddramaiah Bengaluru City Rounds
KARNATAKA

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ‘ಬೆಂಗಳೂರು ಸಿಟಿ ರೌಂಡ್’ ಹೈಲೈಟ್ಸ್ | Siddramaiah Bengaluru City Rounds

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಮಳೆಯಿಂದ ಬೆಂಗಳೂರಲ್ಲಿ ಅವಾಂತರದ ಮುನ್ಸೂಚನೆ ದೊರೆಯುತ್ತಿದ್ದಂತೇ, ಸಿಟಿ ರೌಂಡ್ಸ್ ನಡೆಸಿದರು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ರೌಂಡ್ ಹೊಡೆದ್ರು. ಹಾಗಾದ್ರೇ ಎಲ್ಲೆಲ್ಲಿಗೆ ಭೇಟಿ ನೀಡಿದ್ರು.? ಬೆಂಗಳೂರು ಸಿಟಿ ರೌಂಡ್ಸ್ ಹೈಲೈಟ್ಸ್ ಏನು ಅಂತ ಮುಂದೆ ಓದಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದು ಬೆಂಗಳೂರು ಸಿಟಿ ರೌಂಡ್ಸ್ ಮಾಡಿದ್ರು.  ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಭೇಟಿ ಮಾಹಿತಿ ಪಡೆದರು.

ಸ್ಪಾಟ್-1

ಸ್ಥಳ: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ

ವಿಧಾನಸಭಾ ಕ್ಷೇತ್ರ: ವಿಜಯನಗರ

ಯಾವ ವಾರ್ಡ್: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್

ಸಮಸ್ಯೆ ಏನು: ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದೆ.

ಮುಖ್ಯಮಂತ್ರಿಗಳ ಸೂಚನೆ ಏನು:
ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸುವಂತೆ ಸೂಚಿಸಿದರು.

ಸಮಸ್ಯೆ ಬಗೆಹರಿಸಲು ಕೊಟ್ಟ ಕಾಲ ಮಿತಿ ಮಳೆಗಾಲದೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಎಚ್ಚರಿಕೆ: ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕು. ಇಲ್ಲದೊದ್ದರೆ ಸಸ್ಪೆಂಡ್ ಆಗ್ತೀರ ಎಂದು ಚೀಫ್ ಎಂಜಿನಿಯರ್ ಗೆ ಎಚ್ಚರಿಸಿದ ಸಿಎಂ

ಸ್ಪಾಟ್ – 2

ಸ್ಥಳ: ನಾಯಂಡಹಳ್ಳಿ

ವಿಧಾನಸಭಾ ಕ್ಷೇತ್ರ: ವಿಜಯನಗರ

ಯಾವ ವಾರ್ಡ್: ನಾಯಂಡಹಳ್ಳಿ ವಾರ್ಡ್

ಸಮಸ್ಯೆ ಏನು: ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್‌ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ.

ಮುಖ್ಯಮಂತ್ರಿಗಳ ಸೂಚನೆ ಏನು: ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡುವಂತೆ ಎರಡೂ ಇಲಾಖೆಗಳಿಗೆ ಸೂಚನೆ ನೀಡಿದರು.

ಕಾಲಮಿತಿ: ಈ ವರ್ಷದೊಳಗೆ

ಸ್ಥಳ- 3: ಬಿಟಿಎಂ ಮೆಟ್ರೋ ಸ್ಟೇಷನ್

ವಾರ್ಡ್- ಬಿಟಿಎಂ ಲೇಔಟ್‌

ವಿಧಾನಸಭೆ ಕ್ಷೇತ್ರ: ಬಿಟಿಎಂ ಲೇಔಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್‌ ಡೆಕ್ಕರ್‌ – 2 tier ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ಟೆಂಪಲ್‌ ಸರ್ಕಲ್‌, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಸೂಚಿಸಿದರು.

ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ: ಸಿಎಂ ಪ್ರಶ್ನೆ

ಸಿಟಿ ರೌಂಡ್ಸ್ ವೇಳೆ ಸಿಎಂ‌ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಬನಶಂಕರಿ 2nd stage 100 ft. ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.

ಸ್ಥಳ- 4: ಕೋಡಿ ಚಿಕ್ಕನಹಳ್ಳಿ
ವಾರ್ಡ್‌: ನಂ. 188

ವಿಧಾನಸಭಾ ಕ್ಷೇತ್ರ: ಬೊಮ್ಮನಹಳ್ಳಿ
ಸಮಸ್ಯೆ: ರಾಜಕಾಲುವೆಯಿಂದ ನೀರು ಹೊರಗೆ ಹರಿದು, ಮನೆಗಳಿಗೆ ನೀರು ನುಗ್ಗುವ ಸಮಸ್ಯೆ
ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು: ಇಲ್ಲಿನ ಪ್ರವಾಹ ನಿಯಂತ್ರಣಕ್ಕೆ ಜಾಕ್‌ವೆಲ್‌ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು. 4.3 ಕೋಟಿ ರೂ. ವೆಚ್ಚದ ಈ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸಲು ಸೂಚಿಸಿದರು.

ಸಿಟಿ ರೌಂಡ್ಸ್ ನಲ್ಲೂ ಗ್ಯಾರಂಟಿ ಹವಾ

ಸಿಟಿ ರೌಂಡ್ಸ್ ಗೆ ಬಂದ ಮುಖ್ಯಮಂತ್ರಿಗಳಿಗೆ ಬೆಂಗಳೂರು ನಗರವಾಸಿಗಳು ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿ ಬಗ್ಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದರು.

ಸಮಸ್ಯೆಗಳನ್ನು ಆಲಿಸುತ್ತ ಸಿಎಂ ಗೆ ಸಾರ್ವಜನಿಕರು ಮುಗಿಬಿದ್ದು ಗ್ಯಾರಂಟಿ ಯೋಜನೆಗಳಿಂದ ತಮ್ಮ ಕುಟುಂಬಗಳಿಗೆ ಆಗಿರುವ ಅನುಕೂಲಗಳನ್ನು ವಿವರಿಸಿ ಅಭಿನಂದಿಸಿದರು.

ಸ್ಪಾಟ್- 5

ಸ್ಥಳ: ಸಿಲ್ಕ್‌ ಬೋರ್ಡ್‌
ಹೊಸೂರು ಮುಖ್ಯರಸ್ತೆ

ವಿಧಾನಸಭಾ ಕ್ಷೇತ್ರ: ಬೊಮ್ಮನಹಳ್ಳಿ

ಸಮಸ್ಯೆ: ಮಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ.

ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು: ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು 4.5 ಕೋಟಿ ಕಾಮಗಾರಿ ಅಗತ್ಯವಿದೆ ಹಾಗೂ ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವಿವರಿಸಿದರು. ಪರ್ಯಾಯ ವ್ಯವಸ್ಥೆಯ ಕಾಮಗಾರಿ ಕೈಗೊಳ್ಳಲು ಸಮ್ಮತಿಸಿದ ಮುಖ್ಯಮಂತ್ರಿಗಳು ಮುಂದಿನ ಉನ್ನತಾಧಿಕಾರ ಸಮಿತಿ ಸಭೆಯ ಮುಂದೆ ಮಂಡಿಸಲು ಸೂಚಿಸಿದರು. ಜೊತೆಗೆ ಈ ಯೋಜನೆಯನ್ನು ಮುಂದಿನ 10-15 ವರ್ಷಗಳ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದರು. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಸ್ಥಳ: ಈಜಿಪುರ

ವಿಧಾನಸಭಾ ಕ್ಷೇತ್ರ: ಶಾಂತಿನಗರ

ಸಮಸ್ಯೆ: ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ವಿಪರೀತ ಕಿರಿಕಿರಿ ಆಗುತ್ತಿದೆ. 2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್‌ ಕಾಮಗಾರಿ.

ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು: ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ ದಿನಾಂಕ 20-11-2023 ರಂದು BSCPL ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್‌ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಕಳೆದ ಆರು ತಿಂಗಳಲ್ಲಿ ಕೇವಲ ಶೇ. 4 ರಿಂದ 6 ರಷ್ಟು ಪ್ರಗತಿಯಾಗಿದೆ. ಈ ಮಾಹಿತಿ ತಿಳಿದ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ನಿಯಮಾನುಸಾರ ನೋಟಿಸ್‌ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್‌ ರದ್ದುಪಡಿಸಿ, ಬೇರೆಯವರಿಗೆ ಗುತ್ತಿಗೆ ನೀಡುವಂತೆ ಸೂಚಿಸಿದರು.

ಅಗತ್ಯ ಹಣ ಕೊಟ್ಟಿದ್ದರೂ ಆರು ತಿಂಗಳಲ್ಲಿ ಕೇವಲ 4% ಕಾಮಗಾರಿ ಮಾಡಿದ್ದೀಯಲ್ಲಾ, ಸಾರ್ವಜನಿಕರಿಗೆ ಆಗುವ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವಾ, ನಿನ್ನ ಕೈಲಿ ಆಗದಿದ್ದರೆ ಜಾಗ ಖಾಲಿ ಮಾಡಿ ಎಂದು ಕಂಪನಿ ಪ್ರತಿನಿಧಿಗಳಿಗೆ ಸಿಎಂ ಸ್ಪಷ್ಟ ಎಚ್ಚರಿಕೆ ನೀಡಿದರು.

‘CP ಯೋಗೇಶ್ವರ್’ ವಿರುದ್ಧ ಸಿಡಿದೆದ್ದ ‘ಪುತ್ರಿ ನಿಶಾ’: ಕಣ್ಣೀರಿಡುತ್ತಲೇ ‘ತಂದೆ’ ಬಗ್ಗೆ ಹೇಳಿದ್ದೇನು ಗೊತ್ತಾ?

BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ 'ಬೆಂಗಳೂರು ಸಿಟಿ ರೌಂಡ್' ಹೈಲೈಟ್ಸ್ | Siddramaiah Bengaluru City Rounds
Share. Facebook Twitter LinkedIn WhatsApp Email

Related Posts

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

1 Min Read

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

1 Min Read

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

1 Min Read
Recent News

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

ಆನೆಧಾಮಕ್ಕೆ ಶೀಘ್ರವೇ ಟೆಂಡರ್, ಹೊಸ ಮೃಗಾಲಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಈಶ್ವರ ಖಂಡ್ರೆ

State News
KARNATAKA

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

By ಸುರೇಶ್‌ KARNATAKA 1 Min Read

ಮಂಡ್ಯ : ಹೆಂಡತಿಯ ಮುಂದೆ ಸ್ಟೇಟಸ್ ತೋರಿಸಲು ಹೋಗಿ ಪೊಲೀಸರ ಕೈಗೆ ತಗಲಾಕ್ಕೊಂಡ ಐನಾತಿ ಪತಿಯೊಬ್ಬ ಇದೀಗ ಪೋಲೀಸರ ಅಥಿತಿಯಾಗಿದ್ದಾನೆ.…

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

ಆನೆಧಾಮಕ್ಕೆ ಶೀಘ್ರವೇ ಟೆಂಡರ್, ಹೊಸ ಮೃಗಾಲಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.