ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಟಿಕೆಟ್ ಬ್ಲಾಕ್ ನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ 7 ಜನರ ವಿರುದ್ಧ ಇದೀಗ ಕೇಸ್ ದಾಖಲಿಸಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೋಲಿಸರು 7 ಆರೋಪಿಗಳ ವಿರುದ್ಧ FIR ದಾಖಲಿಸಿದ್ದಾರೆ.
ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹಿದ್, ಲಿಖಿತ್ ಹಾಗೂ ಪುನೀತ್ ಎಂಬುವರ ವಿರುದ್ಧ ಪೊಲೀಸರು FIR ದಾಖಲು ಮಾಡಿಕೊಂಡಿದ್ದಾರೆ. ಸ್ಟೇಡಿಯಂ ಬಳಿ ಹೆಚ್ಚಿನ ಹಣಕ್ಕೆ ಟಿಕೆಟ್ ಮಾರಾಟ ಮಾಡುತ್ತಿದ್ದರು. ಸಿಸಿಬಿ ಪೊಲೀಸರಿಂದ ಮಾನಿಟರ್ ಮಾಡಲಾಗಿತ್ತು.
ಮಾನಿಟರ್ ವೇಳೆ ರೆಡ್ ಹ್ಯಾಂಡ್ ಆಗಿ ಆರೋಪಿಗಳು ಸಿಗಿಬಿದ್ದಿದ್ದಾರೆ. ಬ್ಲಾಕ್ ನಲ್ಲಿ ಟಿಕೆಟ್ ಮಾರಾಟಕ್ಕೆ ಈ ಒಂದು ಗುಂಪು ಯತ್ನಿಸುತ್ತಿತ್ತು. ಸದ್ಯ ಆರೋಪಿಗಳ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಮೂರು FIR ದಾಖಲಾಗಿದೆ.








