ಬೆಂಗಳೂರು : ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಹಾಕದನ ನಡೆಯಲಿದೆ. ಹಾಗಾಗಿ ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಪಾರ್ಕಿಂಗ್ ಅನ್ನು ನಿಷೇಧಿಸಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲೂ ಪಾರ್ಕಿಂಗ್ ನಿಷೇಧ ಮಾಡಿದ್ದೂ, ಮಧ್ಯಾಹ್ನ 3 ರಿಂದ ರಾತ್ರಿ 11:00 ವರೆಗೆ ಇದೀಗ ಪಾರ್ಕಿಂಗ್ ನಿಷೇಧಿಸಲಾಗಿದೆ. ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ತ್ರಿನಿಟಿ ಲೆವೆಲ್ಲಿ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಇನ್ನು ಮ್ಯಾಚ್ ನೋಡಲು ಬರುವವರಿಗೆ ಬೇರೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮಹಡಿಯ ಸೇರಿದಂತೆ ಹಲವು ಬೇರೆ ಬೇರೆ ಪ್ರದೇಶಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಂದೆಡೆ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯ ಬಹಳ ರೋಚಕ ಹಾಗೂ ಕುತೂಹಲ ಮೂಡಿಸಿದ್ದು, ಇನ್ನೊಂದಡೆ ಬೆಂಗಳೂರಿನಲ್ಲಿ ಮಳೆರಾಯನ ಭೀತಿ ಕೂಡ ಎದುರಾಗಿದೆ.ಹೌದು ಇಂದು ಒಂದು ವೇಳೆ ಮಳೆ ಬಂದರೆ ಆರ್‌ಸಿಬಿ ಪ್ಲೇ ಆಫ್ ಕನಸು ನುಚ್ಚು ನೂರಾಗಲಿದೆ. ಹಾಗಾಗಿ ಮಳೆರಾಯನಲ್ಲೂ ಕೂಡ ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Share.
Exit mobile version