ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 68ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊಯಿನ್ ಅಲಿ ಬದಲಿಗೆ ಮಿಚೆಲ್ ಸ್ಯಾಂಟ್ನರ್ ಆಡುವ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಋತುರಾಜ್ ಗಾಯಕ್ವಾಡ್ ಹೇಳಿದ್ದಾರೆ.
ಸಿಎಸ್ಕೆ ವಿರುದ್ಧ ಕನಿಷ್ಠ 18 ರನ್ ಅಥವಾ 11 ಎಸೆತಗಳು ಬಾಕಿ ಇರುವಾಗಲೇ ಜಯ ಗಳಿಸಬೇಕಿದೆ. ಅದಕ್ಕಿಂತ ಕಡಿಮೆ ಗೆಲುವಿನ ಅಂತರದಿಂದ ಗೆಲುವು ಸಾಧಿಸಿದರೂ ಆತಿಥೇಯರಿಗೆ ಸಾಕಾಗುವುದಿಲ್ಲ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿ.ಕೀ), ಕರಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗ್ಯೂಸನ್, ಮೊಹಮ್ಮದ್ ಸಿರಾಜ್
ಚೆನ್ನೈ ಸೂಪರ್ ಕಿಂಗ್ಸ್: ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿ.ಕೀ), ಶಾರ್ದುಲ್ ಠಾಕೂರ್, ತುಷಾರ್ ದೇಶಪಾಂಡೆ, ಮಿಚೆಲ್ ಸ್ಯಾಂಟ್ನರ್, ಸಿಮ್ರಾನ್‌ಜೀತ್ ಸಿಂಗ್, ಮಹೇಶ ತೀಕ್ಷಣ