ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ ಪಂದ್ಯವಾಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.
ದಿನಾಂಕ:29/03/2024 ರಂದು ಮಧ್ಯಾಹ್ನ 03.00 ಗಂಟೆಯಿಂದ ರಾತ್ರಿ 11.00 ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ.
* ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ. * ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ * ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ * ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ.
ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು
* ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
* ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
* ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್ * ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಸಾರ್ವಜನಿಕರು ಸಹಕರಿಸಲು ಕೋರಿದೆ.

Share.
Exit mobile version