ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2024ರ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ವಿರಾಟ್ ಕೊಹ್ಲಿ 72.20 ಸರಾಸರಿಯಲ್ಲಿ 361 ರನ್ ಗಳಿಸಿ ಮತ್ತೊಮ್ಮೆ ರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ, ಆದರೆ ಅವರ ಮಧ್ಯಮ ಓವರ್ ಸ್ಟ್ರೈಕ್ ರೇಟ್ 135 ಕಳವಳಕ್ಕೆ ಕಾರಣವಾಗಿದೆ. ಪವರ್ ಪ್ಲೇನಲ್ಲಿ ಆರಂಭ ಪಡೆದ ನಂತರ ನಿರ್ಣಾಯಕ 7-15 ನೇ ಓವರ್ ಹಂತದಲ್ಲಿ ಸ್ಪಿನ್ನರ್ಗಳ ವಿರುದ್ಧ ಭಾರತದ ಸ್ಟಾರ್ ಬ್ಯಾಟ್ಸ್ಮನ್ ನಿಧಾನಗತಿಯಲ್ಲಿ ಆಡುತ್ತಿರುವುದು ಕಂಡುಬಂದಿದೆ.ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ಕೆಕೆಆರ್ ಪಾಯಿಂಟ್ಸ್ ಟೇಬಲ್ನಲ್ಲಿ ಮೂರನೇ ಸ್ಥಾನದಲ್ಲಿದೆ. ಏತನ್ಮಧ್ಯೆ, ಆರ್ಸಿಬಿ ಆಡಿರುವ ಏಳು ಪಂದ್ಯಗಳಲ್ಲಿ ಕೇವಲ ಒಂದು ಗೆಲುವಿನೊಂದಿಗೆ ಕೊನೆಯ ಸ್ಥಾನದಲ್ಲಿದೆ.
ತಂಡಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್.
ಕೋಲ್ಕತಾ ನೈಟ್ ರೈಡರ್ಸ್ ತಂಡ: ಫಿಲಿಪ್ ಸಾಲ್ಟ್ (ವಿಕೆ), ಸುನಿಲ್ ನರೈನ್, ಆಂಗ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ಸಿ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣ್ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.