ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಅಧಿಕಾರಿಗಳು ಶೀಘ್ರದಲ್ಲೇ ದೆಹಲಿಯ ವಿಜ್ಞಾನ ಭವನದಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುರತ್ತಿದ್ದಾರೆ.
ಮತದಾನದ ದಿನಾಂಕಗಳು, ವಿವಿಧ ರಾಜ್ಯಗಳಲ್ಲಿ ಮತದಾನ ನಡೆಯುವ ಹಂತಗಳು ಮತ್ತು ಫಲಿತಾಂಶಗಳ ಪ್ರಕಟಣೆಯಂತಹ ನಿರ್ಣಾಯಕ ವಿವರಗಳನ್ನು ಕುಮಾರ್ ಶೀಘ್ರದಲ್ಲಿ ಘೋಷಿಸಲಿದ್ದಾರೆ. ಲೋಕಸಭಾ ಚುನಾವಣಾ ವೇಳಾಪಟ್ಟಿಯ ಜೊತೆಗೆ, ಚುನಾವಣಾ ಆಯೋಗವು ಆಂಧ್ರಪ್ರದೇಶ, ಸಿಕ್ಕಿಂ ಮತ್ತು ಒಡಿಶಾ ರಾಜ್ಯ ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಸಹ ಪ್ರಕಟಿಸಲಿದೆ.
ಈ ನಡುವೆ ಅವರು “ನಮ್ಮಲ್ಲಿ 97 ಕೋಟಿ ನೋಂದಾಯಿತ ಮತದಾರರು, 10.5 ಲಕ್ಷ ಮತದಾನ ಕೇಂದ್ರಗಳು, 1.5 ಕೋಟಿ ಮತಗಟ್ಟೆ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ, 55 ಲಕ್ಷ ಇವಿಎಂಗಳು, 4 ಲಕ್ಷ ವಾಹನಗಳಿವೆ” ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. 12 ರಾಜ್ಯಗಳಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಪ್ರಮಾಣ ಹೆಚ್ಚಾಗಿದೆ ಒಟ್ಟು 96.8 ಕೋಟಿ ಮತದಾರರಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.