Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ‘ಅಡುಗೆ ಎಣ್ಣೆ’ ತುಂಬಾನೇ ಒಳ್ಳೆಯದು, ನೀವು ಯಾವ್ದು ಬಳಸ್ತೀರಾ!

24/02/2026 10:06 PM

BREAKING : ಫೆ.27ರವೆರೆಗೆ 2026ರ ‘UPSC CSE’ ನೇಮಕಾತಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

24/02/2026 9:51 PM

BREAKING : ವಿಮಾನ ಅಪಘಾತ ಹೆಚ್ಚಳದ ನಡುವೆ ನಿಗದಿತವಲ್ಲದ ನಿರ್ವಾಹಕರಿಗೆ ಕಠಿಣ ಸುರಕ್ಷತಾ ಕ್ರಮ ಪ್ರಕಟಿಸಿದ ‘DGCA’

24/02/2026 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0925/01/2026 6:08 PM

ಕನಕಪುರ: “ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮಗಳು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿಯಾಗಿದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ ಸಹ ಬಹಳ ನಮ್ರತೆಯಿಂದ ಅವರ ಸವಾಲು ಸ್ವೀಕಾರ ಮಾಡುತ್ತೇನೆ, ಚರ್ಚೆಗೆ ಬರಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಸವಾಲು ಎಸೆದರು.

ಕನಕಪುರದ ದೊಡ್ಡ ಆಲಹಳ್ಳಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದ ಉದ್ಘಾಟನಾ ಸಮಾರಂಭದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಡಿ.ಕೆ. ಸಹೋದರರು ನನ್ನ ಜೊತೆ ಚರ್ಚೆ ಬರಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ, “ಕುಮಾರಸ್ವಾಮಿ ಅವರು ಯಾವತ್ತು ಚರ್ಚೆಗೆ ಸಿದ್ಧ ಎಂದು ಹೇಳುವರೋ ಅಂದು ಚರ್ಚೆ ಮಾಡಲು ನಾನು ತಯಾರಿದ್ದೇನೆ. ಮಾಧ್ಯಮಗಳೇ ದಿನಾಂಕ ನಿಗದಿ ಮಾಡಲಿ. ರಾಮಮಂದಿರದ ಮುಂದೆ ಪ್ರಶ್ನೆ ಕೇಳಿದ್ದೀರಿ. ನಾನು ಇದೇ ರಾಮ ಮಂದಿರದಲ್ಲಿ ಕುಳಿತು, ನುಡಿದಂತೆ ನಡೆಯುತ್ತೇನೆ. ಪೂರ್ವನಿಯೋಜಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಈ ಚರ್ಚೆಯ ದಿನಾಂಕದ ಬಗ್ಗೆ ಮೂರು ದಿನ ಮುಂಚಿತವಾಗಿ ತಿಳಿಸಿ, ನಾನು ಚರ್ಚೆಗೆ ಬರುತ್ತೇನೆ” ಎಂದರು.

ಬಿಡದಿ ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಕೇಳಿದಾಗ, “ಅವರು ರಾಜಕಾರಣ ಮಾಡಬೇಕು ಮಾಡುತ್ತಿದ್ದಾರೆ. ಯೋಜನೆಯನ್ನು ನಾನು ಮಾಡಿದ್ದಲ್ಲ, ಅವರೇ ಮಾಡಿದ್ದು. ರೈತರಿಗೆ 800 ಅಡಿ ಭೂಮಿಯನ್ನು ನೀಡುತ್ತೇನೆ ಎಂದು ಭರವಸೆ ಕೊಟ್ಟಿದ್ದೆ ಎಂದು ಅವರೇ ಹೇಳಿದ್ದಾರೆ. ಅವರು ಹೇಳಿದ್ದನ್ನು ನಾವು ಈಗ ಮುಂದುವರೆಸುತ್ತಿದ್ದೇವೆ ಅಷ್ಟೇ” ಎಂದರು‌.

“ಇಲ್ಲಿ ನಾನು ಹಾಗೂ ಕುಮಾರಸ್ವಾಮಿ ಇಬ್ಬರೂ ಶಾಶ್ವತವಲ್ಲ. ಆದರೆ ನಾವು ತೆಗೆದುಕೊಂಡ ತೀರ್ಮಾನ ಶಾಶ್ವತವಾಗಿ ಉಳಿಯುತ್ತದೆ. ನಾನು ಹಾಗೂ ಅವರು ಇಲ್ಲದೇ ಹೋದರೂ ಯೋಜನೆಯಿಂದ ಮುಂದಿನ ಪೀಳಿಗೆಗೆ ಅನುಕೂಲವಾಗಲಿದೆ. ಮುಂದಿನ ಜನಾಂಗ ನಮ್ಮನ್ನು ನೆನಪಿಸಿಕೊಳ್ಳಲಿದೆ. ನನ್ನ‌ ಕ್ಷೇತ್ರದ ರಸ್ತೆಗಳ ಅಗಲೀಕರಣ ಮಾಡಲಾಗಿದೆ. ಇದಕ್ಕೆ ಎಷ್ಟು ಪರಿಹಾರ ದೊರಕಿದೆ ಎಂದು ದೊಡ್ಡಆಲಹಳ್ಳಿ, ಸಾತನೂರು, ಕನಕಪುರದವರನ್ನು ಕೇಳಿ. ದೊಡ್ಡ ಆಲಹಳ್ಳಿಯಲ್ಲಿ ಅಡಿಗೆ 1,500 ರೂಪಾಯಿ ಪರಿಹಾರ ಕೊಡಿಸಿದ್ದೇನೆ. ನಗರ ಭಾಗದ ಸೌಲಭ್ಯಗಳನ್ನು ಇಲ್ಲಿ ಮಾಡಿಕೊಡಲಾಗಿದೆ. ನಾನು ಮಾಧ್ಯಮಗಳಿಗೆ ಉತ್ತರಿಸುವ ಬದಲು ನೇರವಾಗಿ ಕುಮಾರಸ್ವಾಮಿ ಅವರಿಗೇ ಉತ್ತರ ನೀಡುತ್ತೇನೆ” ಎಂದರು.

ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ?

ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಜನ ಅಪೇಕ್ಷಿಸುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ. ಈಗಲೂ ರಾಜಕಾರಣದಲ್ಲಿ ಇದ್ದಾರೆ ಅಲ್ಲವೇ. ರಾಷ್ಟ್ರ ಏನು, ರಾಜ್ಯ ಏನು ಎಂದು ನನಗೆ ಗೊತ್ತಿಲ್ಲ” ಎಂದರು.

ಅಂತಿಮ ದಿನಗಳನ್ನು ರಾಮನಗರ ಜಿಲ್ಲೆಯಲ್ಲಿಯೇ ನಾನು ಮುಂದುವರೆಸುತ್ತೇನೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ದೇವರು ಅವರಿಗೆ ಒಳ್ಳೆಯದನ್ನು ಮಾಡಲಿ. ಅವರಿಗೆ ಶಕ್ತಿ ಕೊಡಲಿ, ಅವರ ಆಸೆ ಏನಿದೆಯೋ ಅದನ್ನು ಕೇಳಿಕೊಳ್ಳಲಿ. ಜನವುಂಟು, ಅವರುಂಟು. ಅದೇ ರೀತಿ ಜನವುಂಟು ನಾವುಂಟು” ಎಂದರು.

500 ಕ್ಕೂ ಹೆಚ್ಚು ದೇವಾಲಯಗಳ ನಿರ್ಮಾಣ

“ನಮ್ಮ ಕ್ಷೇತ್ರದಲ್ಲಿ ಒಂದೆರಡು ದೇವಾಲಯ ಮಾತ್ರವಲ್ಲ, ಸುಮಾರು 500ಕ್ಕೂ ಹೆಚ್ಚು ದೇವಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ದೊಡ್ಡ ಆಲಹಳ್ಳಿಯಲ್ಲಿ ಏಳೆಂಟು ದೇವಾಲಯಗಳನ್ನು ನಿರ್ಮಿಸಲಾಗಿದೆ. ಪಟ್ಟಲದಮ್ಮ ದೇವಸ್ಥಾನವನ್ನು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ‌. ನಮ್ಮ ತಂದೆಯವರು ಅವರ ಕಾಲದಲ್ಲಿ ಶಂಕರೇಶ್ವರ ದೇವಾಲಯವನ್ನು ಕಟ್ಟಿಸಿದರು. ಈ ಮೊದಲಿದ್ದ ರಾಮ ಮಂದಿರದಲ್ಲಿ ಭಜನೆ ಮಾಡಲಾಗುತ್ತಿತ್ತು. ಎಲ್ಲರ ಸಹಕಾರದಿಂದ ಇಡೀ ಕ್ಷೇತ್ರದಲ್ಲಿ ಉತ್ತಮ ದೇವಾಲಯಗಳ ನಿರ್ಮಾಣ ಮಾಡಲಾಗಿದೆ” ಎಂದು ತಿಳಿಸಿದರು.

“ಎಲ್ಲಾ ಧರ್ಮದವರಿಗೂ ನಾವು ಸಹಾಯ ಮಾಡುತ್ತಿದ್ದೇವೆ. ಮುಸ್ಲಿಮರಿಗೆ ಮಸೀದಿ, ಕ್ರೈಸ್ತರ ಚರ್ಚ್ ನಿರ್ಮಾಣಕ್ಕೆ ಸಹಾಯ ಮಾಡಿದ್ದೇವೆ. ಜೊತೆಗೆ ಎಲ್ಲಾ ಸಮುದಾಯದವರ ಅವಶ್ಯಕತೆ ಸ್ಪಂದಿಸಲಾಗಿದೆ. ರಾಮ ಮಂದಿರವನ್ನು ಒಂದು ಪಂಗಡ ನೋಡಿಕೊಳ್ಳುತ್ತದೆ. ತಿಗಳ ಸಮುದಾಯದವರು ಇನ್ನೊಂದು ದೇವಸ್ಥಾ‌ನ ನೋಡಿಕೊಳ್ಳುವರು. ಊರಿನ ಎಲ್ಲರೂ ಸೇರಿ ಊರಿನ ದೇವಸ್ಥಾನ ನೋಡಿಕೊಳ್ಳುವರು” ಎಂದರು.

ರಾಮಮಂದಿರ ಶಕ್ತಿ ನೀಡಲಿ ಎನ್ನುವ ಮನವಿಯ ಬಗ್ಗೆ ಕೇಳಿದಾಗ, “ನಾನು ಜೈಲಿಗೆ ಹೋದಾಗ ನನ್ನ ಕ್ಷೇತ್ರದ ಜನ ಬರಿಗಾಲಿನಲ್ಲಿ ಕಾಲಿಗೆ ಚಪ್ಪಲಿ ಇಲ್ಲದೇ ದೆಹಲಿಯವರೆಗೆ ಬಂದಿದ್ದಾರೆ. ನನಗೆ ಜಾಮೀನು ನೀಡಬಾರದು ಎಂದಿತ್ತು. ಆದರೆ ಕ್ಷೇತ್ರದ ಜನರ ಪ್ರಯತ್ನ ಹಾಗೂ ಪ್ರಾರ್ಥನೆಯಿಂದಾಗಿಯೇ 48 ದಿನಗಳಲ್ಲಿ ಜೈಲಿನಿಂದ ಬಿಡುಗಡೆಯಾದೆ‌. ನನಗೆ ನನ್ನ ಕ್ಷೇತ್ರದ ಜನರೇ ಆಸ್ತಿ. ಈ ಊರಿನಲ್ಲಿದ್ದ ಅನೇಕ ಆಸ್ತಿಯನ್ನು ಜನರಿಗೆ ಬಿಟ್ಟಿದ್ದೇನೆ. ತಾತ, ಮುತ್ತಾತರ ಕಾಲದ ಆಸ್ತಿಗಳನ್ನು ಶಾಲೆ, ಹಾಸ್ಟಲ್ ಗಾಗಿ ದಾನ ಮಾಡಿದ್ದೇನೆ. ಮಾರಾಟ ಮಾಡಲು ಹೋದರೆ ಯಾರಾದರೂ ತೆಗೆದುಕೊಳ್ಳುವರೇ? ಕ್ಷೇತ್ರದ ಜನ ನಮ್ಮನ್ನು ಬೆಳೆಸಿದ್ದಾರೆ, ಸಾಕಿದ್ದಾರೆ‌ ಅವರುಗಳೇ ಅವುಗಳನ್ನು ಉಪಯೋಗಿಸಿಕೊಳ್ಳಲಿ” ಎಂದು ತಿಳಿಸಿದರು.

ರೈಲ್ವೆ ನಿಲ್ದಾಣದಲ್ಲಿ ಪ್ರಾಧ್ಯಾಪಕನನ್ನು ಚಾಕುವಿನಿಂದ ಇರಿದು ಕೊಂದ ಆರೋಪಿ ಅರೆಸ್ಟ್

ಸ್ವಿಮ್ಮಿಂಗ್ ಪೂಲ್ ನಲ್ಲಿ ಮಹಿಳೆ ಶವವಾಗಿ ಪತ್ತೆ: ಪತಿಯಿಂದಲೇ ಕೊಲೆ ಶಂಕೆ

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

24/02/2026 8:39 PM1 Min Read

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM3 Mins Read

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM2 Mins Read
Recent News

ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ‘ಅಡುಗೆ ಎಣ್ಣೆ’ ತುಂಬಾನೇ ಒಳ್ಳೆಯದು, ನೀವು ಯಾವ್ದು ಬಳಸ್ತೀರಾ!

24/02/2026 10:06 PM

BREAKING : ಫೆ.27ರವೆರೆಗೆ 2026ರ ‘UPSC CSE’ ನೇಮಕಾತಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

24/02/2026 9:51 PM

BREAKING : ವಿಮಾನ ಅಪಘಾತ ಹೆಚ್ಚಳದ ನಡುವೆ ನಿಗದಿತವಲ್ಲದ ನಿರ್ವಾಹಕರಿಗೆ ಕಠಿಣ ಸುರಕ್ಷತಾ ಕ್ರಮ ಪ್ರಕಟಿಸಿದ ‘DGCA’

24/02/2026 9:35 PM

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

24/02/2026 8:39 PM
State News
KARNATAKA

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

By kannadanewsnow0924/02/2026 8:39 PM KARNATAKA 1 Min Read

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಕಾರ್ಮಿಕರಿಬ್ಬದು ಬಿದ್ದು ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ. ಹುಬ್ಬಳ್ಳಿಯ ಕೆ ಎಲ್ ಇ…

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.