ಬೆಂಗಳೂರು: ರಾಜ್ಯದಲ್ಲಿ ಅಪಘಾತದಿಂದ ಗಾಯಗೊಂಡವರ ರಕ್ಷಣೆಗಾಗಿ ಸೇವೆ ಸಲ್ಲಿಸಲು 65 ಅಂಬುಲೆನ್ಸ್ ಗಳನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ. ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಇಂದು ವಿಧಾನಸೌಧದ ಬಳಿಯಲ್ಲಿ ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ Hour ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಅಂಬ್ಯುಲೆನ್ಸ್ ಗಳನ್ನ ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ.
ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಅಂಬ್ಯುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನ ಅಳವಡಿಸಲಾಗಿದೆ. 39 BLS ಅಂಬ್ಯುಲೆನ್ಸ್ ಗಳಿವೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್ ಗಳನ್ನ ಗುರುತಿಸಿದ್ದು, ಅಂಥಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಅಂಬ್ಯುಲೆನ್ಸ್ ಗಳನ್ನ ನೀಡಲಾಗಿದೆ.
ಈ ವೇಳೆ ಯೋಜನೆಗೆ ರಸ್ತೆ ಸುರಕ್ಷತಾ ನಿಧಿಯಡಿ ನೆರವು ಒದಗಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇನ್ನೂ ಹೆಚ್ಚಿನ ಅಂಬ್ಯುಲೆನ್ಸ್ ಗಳನ್ನ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡುವುದಾಗಿ ಇದೇ ವೇಳೆ ಘೋಷಿಸಿದರು.
ರಸ್ತೆ ಸಂಚಾರದ ಅಪಘಾತಗಳಲ್ಲಿ ಗಾಯಾಳುಗಳು ಹಾಗೂ ಸಾವು ನೋವುಗಳನ್ನ ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅಪಘಾತ ಪ್ರಕರಣಗಳಿಗಾಗಿಯೇ ಪ್ರತ್ಯೇಕ ಅಂಬ್ಯುಲೆನ್ಸ್ ಗಳನ್ನ ಆರೋಗ್ಯ ಇಲಾಖೆ ಒದಗಿಸಿರುವುದು ಅತ್ಯಂತ ಉತ್ತಮ ನಿರ್ಧಾರವಾಗಿದ್ದು, ರಾಜ್ಯದಾದ್ಯಂತ ಯೋಜನೆ ವಿಸ್ತರಿಸಲು ಸಾರಿಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಅಪಘಾತಕ್ಕೀಡಾದವರ ರಕ್ಷಣೆಗೆ ಆಪತ್ಬಾಂಧವನಾಗಿ ಕಾರ್ಯನಿರ್ವಹಿಸಲಿವೆ 65 ಅಂಬ್ಯುಲೆನ್ಸ್: ಸಿಎಂ ಚಾಲನೆ
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!