ಬೆಂಗಳೂರು : ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಟ ದರ್ಶನ್ ಬಳ್ಳಾರಿ ಜೈಲಿನ್ನಿಂದ ರಿಲೀಸ್ ಆಗಿದ್ದರು. ಇದೀಗ ಎಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನವರು ಭೇಟಿ ನೀಡಿದ್ದಾರೆ.
ಹೌದು ಬೆನ್ನು ನೋವಿನ ಚಿಕಿತ್ಸೆಗಾಗಿ ನಟ ದರ್ಶನ್ ಇದೀಗ ಬಿಜಿಎಸ್ ಆಸ್ಪತ್ರೆಗೆ ಬಂದಿದ್ದಾರೆ. ಬೆಂಗಳೂರು ಹೊರಭಾಗದಲ್ಲಿ ಇರುವಂತಹ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ನಟ ದರ್ಶನ್ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ.ಆಸ್ಪತ್ರೆಯ ಬಳಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಇದೇ ಒಂದು ಬೆನ್ನುನೋವಿನ ಸಮಸ್ಯೆ ಕಾರಣವನ್ನು ನೀಡಿ ಹೈಕೋರ್ಟ್ ನಲ್ಲಿ ನಡೆದ ದರ್ಶನ್ ಹಿರಿಯ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು ಒಂದು ವೇಳೆ ಕೂಡಲೇ ಚಿಕಿತ್ಸೆ ಪಡೆದುಕೊಳ್ಳದೆ ಹೋದಲ್ಲಿ ಅವರಿಗೆ ಪಾರ್ಶ್ವ ವಾಯು ಆಗುವ ಸಾಧ್ಯತೆ ಇದೆ ಎಂದು ಮನವರಿಕೆ ಮಾಡಿದ್ದರು ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.