ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಂತ ಕೆ.ಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವಂತ ರಘುಪತಿ ಭಟ್ ಗೆ ನೋಟಿಸ್ ನೀಡಿ ಶಾಕ್ ನೀಡಿದೆ.
ಇಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ನಡೆಯುವ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುತ್ತೀರಿ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತೆ ಆಗಿದೆ ಎಂದಿದ್ದಾರೆ.
ಇನ್ನೂ ಈ ಪತ್ರ ತಲುಪಿದ ಎರಡು ದಿನಗಳ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕು ಎಂದು ನೋಟೀಸ್ ನಲ್ಲಿ ಮಾಜಿ ಶಾಸಕ ರಘುಪತಿ ಭಟ್ ಗೆ ಸೂಚಿಸಲಾಗಿದೆ.
BREAKING: ‘ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ’ ಆರೋಗ್ಯದಲ್ಲಿ ಏರುಪೇರು: ಅಸ್ಪತೆಗೆ ದಾಖಲು | Kagodu Thimmappa
ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!