ಬೆಂಗಳೂರು: ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ. ಶಿಕ್ಷಕರ ವರ್ಗಾವಣೆಯಲ್ಲಿ ಕೆಲ ಗೊಂದಲಗಳ ನಿವಾರಣೆ ಕುರಿತ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ. ಇದೇ ವೇಳೆ SC/ST, BPL ಕಾರ್ಡ್ದಾರರಿಗೆ ಚ75 ಯುನಿಟ್ ತನಕ ಉಚಿತ ವಿದ್ಯುತ್ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಇಂದು ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದೇ ವೇಳೆ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬಿಬಿಎಂಪಿಯ 3673, ನಗರಸಭೆ ಮತ್ತು ಪುರಸಭೆಯ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1,927 ಗುತ್ತಿಗೆ ನೌಕರರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಪೌರಕಾರ್ಮಿಕರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ಮುಂದಾಗಿರುವುದು ಕಾರ್ಮಿಕರ ಮೊಗದಲ್ಲಿ ಮಂದ ಹಾಸ ಮೂಡಿದೆ. ಇದೇ ವೇಳೆ ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ಸಂಬಂಧ ಬೆಂಗಳೂರು ಮೆಟ್ರೋಪಾಲಿಟಿನ್ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ 2022ಕ್ಕೆ ಅನುಮೋದನೆ ನೀಡಿದೆ. ಇನ್ನೂ ಮುಖ್ಯಮಂತ್ರಿ ವಿದ್ಯಾಸಿರಿ ಯೋಜನೆಯನ್ನು ಮೀನುಗಾರರ,ಮೀನು ಕೃಷಿಕರ ಮಕ್ಕಳಿಗೂ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಇದಲ್ಲದೇ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರವನ್ನು 50 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ