ಬೆಂಗಳೂರು: ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಸಂಬಂಧಿಸಿದ ಅನೇಕ ಪ್ರಸ್ತಾವನೆಗಳಿಗೆ ಅನುಮೋದನೆ ಮಾಡಿಕೊಟ್ಟಿದ್ದಾರೆ. ಇನ್‌ಸ್ಪೆಕ್ಟರ್ ಹುದ್ದೆಯಿಂದ ಎಸ್‌ಪಿ ಹುದ್ದೆಯವರೆಗಿನ ಅಧಿಕಾರಿಗಳನ್ನು ಎರಡು ವರ್ಷದವರೆಗೆ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೇವೆ. ಕನಿಷ್ಟ ಎರಡು ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಟ್ಟರೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಬದಲಾವಣೆ ತಂದಿದ್ದೇವೆ. ಬಹಳ ಜನ ಇದನ್ನು ಪ್ರಶಂಸೆ ಮಾಡಿದ್ದಾರೆ. ಕೆಳ ಹಂತದ ಸಿಬ್ಬಂದಿಗಳಿಗೆ ಎಸ್‌ಪಿ ಹಂತದಲ್ಲಿ ವರ್ಗಾವಣೆ ಮಾಡಲು ಅವಕಾಶ ಮಾಡ ಕೊಟ್ಟಿದ್ದೇವೆ ಎಂದರು.
ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಹೇಳಿದರು.
ಪೊಲೀಸ್ ಗೃಹ ಯೋಜನೆಗೆ ಸಾವಿರಾರು ಕೋಟಿ ರೂ. ಅನುದಾನ ನೀಡಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇಲಾಖೆಯ ಸಿಬ್ಬಂದಿಗಳಿಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 16 ಸಾವಿರ ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದೇವೆ. ಈ ಯೋಜನೆಯನ್ನು ಐದು ವರ್ಷ ಮುಂದುವರೆಸುವುದಾಗಿ ಸಿಎಂ ಅವರು ಹೇಳಿದ್ದಾರೆ. ಅವರಿಗೆ ಅಭಿನಂದನೆಗಳು.
ಪೊಲೀಸರ ಆರೋಗ್ಯ ತಪಾಸಣೆ ವೆಚ್ಚವನ್ನು 1500 ರೂ. ಹೆಚ್ಚಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಕುಟುಂಬಸ್ಥರಿಗೆ ಉದ್ಯೋಗ ಕೊಡಬೇಕು ಎಂಬ ನಿಯಮ ಇದೆ. ಅನೇಕ ಕಾರಣಗಳಿಂದ ನೆನೆಗುದಿಗೆ ಬಿದ್ದಿತ್ತು. ಇದಕ್ಕೆ ಹೆಚ್ವಿನ ರೀತಿಯಲ್ಲಿ ಕ್ರಮ ತೆಗೆದುಕೊಂಡು, ನೂರಾರು ಮೃತ ಪೊಲೀಸರ ಕುಟುಂಬದವರಿಗೆ ಉದ್ಯೋಗ ನೀಡಲಾಗಿದೆ.
ಇಲಾಖೆಯಲ್ಲಿ ರಜೆ ತೆಗೆದುಕೊಳ್ಳುವುದೇ ದೊಡ್ಡ ಸಮಸ್ಯೆಯಾಗಿತ್ತು. ಇದನ್ನು ಸರಳಗೊಳಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳ ಪರವಾದ ವಾತಾವರಣವನ್ನು ಅಧಿಕಾರಿಗಳು ಸೃಷ್ಟಿ ಮಾಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಒಳ್ಳೆಯ ವಾತಾವರಣ ಮಾಡಿಕೊಟ್ಟಿದೆ. ರಾಜ್ಯದ ಜನತೆಯ ಆಪೇಕ್ಷೆಯಂತೆ ಕೆಲಸ ಮಾಡಬೇಕಿದೆ. ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ಮಾಡಬೇಕು ಎಂಬ ಬದ್ಧತೆ ನಮಗೆ ಇದೆ. ಆ ದೃಷ್ಟಿಯಲ್ಲಿ ತಾವೆಲ್ಲ ಕೆಲಸ ಮಾಡುತ್ತೀರಿ ಎಂದು ಭರವಸೆ ವ್ಯಕ್ತಪಡಿಸಿದರು.
ಮಾದಕ ವಸ್ತು ಸಮಾಜಕ್ಕೆ ದೊಡ್ಡ ಪಿಡುಕು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಮುಖ್ಯಮಂತ್ರಿಯವರು ಸದನದಲ್ಲಿ ಘೋಷಣೆ ಮಾಡಿದ್ದಾರೆ. ಈ ದೃಷ್ಟಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ಅನೇಕ ಕೆಲಸಗಳು ನಡೆಯುತ್ತಿವೆ. ಕಳೆದ ಎರಡು ವರ್ಷದಿಂದ ಸುಮಾರು 250 ರಿಂದ 300 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿ, ನಾಶಪಡಿಸಲಾಗಿದೆ. ಇಷ್ಟೊಂದು ಎಚ್ಚರಿಕೆಯಿಂದ ಕೆಲಸ ಮಾಡಿದರು ಸಹ ಡ್ರಗ್ಸ್ ಬರುತ್ತಿದೆ. ಪಾರ್ಸಲ್ ಸೇರಿದಂತೆ ವಿವಿಧ ರೂಪದಲ್ಲಿ ಬರುತ್ತಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಪೆಡ್ಲರ್‌ಗಳು ಮತ್ತು ಮಾದಕ ವ್ಯಸನಿಗಳ ಹಿಂದೆ ಒಬ್ಬ ಪೊಲೀಸರನ್ನು ಬಿಡುತ್ತೇವೆ. ಸನ್ಮಿತ್ರ ಕಾರ್ಯಕ್ರಮದಲ್ಲಿ ಅವರ ನಿಗಾವಹಿಸಲು ಕಾನ್‌ಸ್ಟೇಬಲ್‌ಗಳನ್ನು ನಿಯೋಜಿಸಲಾಗುತ್ತಿದೆ.
ರಾಜ್ಯದಲ್ಲಿ ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಪ್ರತಿಯೊಂದು ಮನೆಯ ಮಾಹಿತಿ ತೆಗೆದುಕೊಂಡರೆ, ದೂರುಗಳು ಬಂದಾಗ ಸಹಾಯ ಆಗುತ್ತದೆ. ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕಲು ಅನುಕೂಲವಾಗುತ್ತದೆ ಎಂದರು.
ಉದ್ಯೋಗಿಗಳೇ ಗಮನಿಸಿ ; ಡಿಎ, ಪಿಂಚಣಿ, ಗ್ರಾಚ್ಯುಟಿ ಸೇರಿ ನಿವೃತ್ತಿ ನಿಯಮಗಳಲ್ಲಿ 5 ಬದಲಾವಣೆ!
‘ಆಧಾರ್’ ಪೌರತ್ವ ಅಥ್ವಾ ಜನ್ಮ ದಿನಾಂಕದ ಪುರಾವೆಯಲ್ಲ ; ಬಳಕೆಯ ಕುರಿತು ‘UIDAI’ ಸ್ಪಷ್ಟನೆ








