ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಬಿಗ್ ಬಾಸ್ ಸ್ಪರ್ಧಿಗಳನ್ನು ಕೋರ್ಟ್ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ.
ಈ ಸಂಬಂಧ ಇಂದು ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಯಿತು. ಪೊಲೀಸರು ವಿಚಾರಣೆಗೆ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.
ಈ ಮನವಿಯನ್ನು ಪರಸ್ಕರಿಸಿರುವಂತ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್, ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.