ಚಿಕ್ಕಬಳ್ಳಾಪುರ : ಬಿಜೆಪಿ ಸಂಸದ ಕೆ ಸುಧಾಕರ್ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿಯಾದ ರಾಧಾ ಮೋಹನ್ ದಾಸ್ ಅಗರ್ವಾವಾಲ್ ಅವರಿಗೆ ದೂರು ಸಲ್ಲಿಸಲಾಗಿದೆ. ಕೆ. ಸುಧಾಕರ್ ನಡೆಯ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತಪಡಿಸಿದ ಸಿ.ಮುನಿರಾಜು ಅವರು ರಾಜ್ಯ ಬಿಜೆಪಿ ಉತ್ಸವ ರಾಧಾ ಮೋಹನ್ದಾಸ್ ಅವರ ಮುಂದೆ ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾದ ಸಿ ಮುನಿರಾಜು ಬಾಗೇಪಲ್ಲಿ ಕ್ಷೇತ್ರಕ್ಕೆ ಸಂಸದ ಕೆ ಸುಧಾಕರ್ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಬೇರೆಯವರನ್ನು ಎನ್‌ಡಿಎ ಅಭ್ಯರ್ಥಿ ಎಂದು ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಸಮ್ಮುಖದಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ದೂರು ನೀಡಿದರು. ಈ ವೇಳೆ ರಾಧಾ ಮೋಹನ್ ದಾಸ್ ಅಗರ್ವಾಲ್ ಸಂಸದ ಕೆ. ಸುಧಾಕರ್ ಅವರ ಜೊತೆ ಮಾತನಾಡುವುದಾಗಿ ತಿಳಿಸಿದರು.








