ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಸಿದ್ದು, ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್ಪಿ ಸಭೆ ಕರೆಯುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಹೈಕಮಾಂಡ್ ಸಂದರ್ಭ ಬಂದಾಗ ಸಿಎಲ್ಪಿ ಕರೆಯುತ್ತಾರೆ. ಆಗ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್ಗೆ ವರದಿ ಕೊಡುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ. ಇದನ್ನು ಶಾರ್ಟ್ ಕಟ್ ಆಗಿ ಹೇಗೆ ಮಾಡುತ್ತಾರೆ ಹೇಳಿ?. ನಾನು, ಸತೀಶ್, ಮಹದೇವಪ್ಪ ಕಾಫಿ ಕುಡಿಯುಲು ಸೇರಿದ್ವಿ. ಇದರ ಹಿಂದೆ ಬೇರೆ ಏನೂ ಇಲ್ಲ ಎಂದರು.
ನಮ್ಮ ಸುತ್ತೋಲೆಯಲ್ಲಿ ಆರ್‌ಎಸ್‌ಎಸ್ ಪದ ಬಂದಿಲ್ಲ. ಆರ್‌ಎಸ್‌ಎಸ್ ಅನ್ನು ಇಟ್ಕೊಂಡು ಆದೇಶ ಮಾಡಿಲ್ಲ. ಇದು ಎಲ್ಲರಿಗೂ ಅನ್ವಯವಾಗುತ್ತದೆ. ಸಂಘರ್ಷ ಆಗಬಾರದು ಅಂತ ನಿಯಮ ಹಾಕಿದ್ದೇವೆ. ಶಾಲಾ, ಕಾಲೇಜಿಗೆ ತೊಂದರೆ ಆಗಬಾರದು. 2013ರಲ್ಲಿ ಶೆಟ್ಟರ್ ಆದೇಶ ಮಾಡಿದ್ದರು. ಅದನ್ನೇ ಪುನರ್ ಪರಿಶೀಲನೆ ಮಾಡಿದ್ದೇವೆ. ಸಮಸ್ಯೆ ಬಂದಾಗ ಪರಿಹಾರ ಕಂಡುಕೊಳ್ಳಬೇಕು. ಸಂಘದ ಪಥ ಸಂಚಲನದಿಂದ ಗೊಂದಲ ಆಗಿದೆ. ತೊಂದರೆ ಆಗಬಾರದೆಂದು ಆದೇಶ ಕೊಟ್ಟಿದ್ದೇವೆ ಎಂದು ತಿಳಿಸಿದರು.