ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರ ಹಾಕಿದ್ದು, ನಿಯಮ ಉಲ್ಲಂಘನೆ ನೆಪದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದಾರೆ. ಹಾಗಾದರೆ ನಿಮ್ಮ ಸರಕಾರದ ಆರಂಭಿಸಿ% ಕಮಿಷನ್ ದಂತೆಗೆ ನೀವು ಯಾವಾಗ ಬೇಗ ಹಾಕಿಸುತ್ತೀರಾ ಎಂದು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಅವರ ಹಾಕಿದೆ.
ಟ್ವೀಟ್ ನಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸ್ತೀರಿ? ರಸ್ತೆಗುಂಡಿ ಯಾವಾಗ ಬಂದ್ ಮಾಡಿಸುತ್ತೀರಿ ಸಿಎಂ, ಡಿಸಿಎಂ ಅವರೇ, ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಿ? ಲೂಟಿ ಹೊಡೆಯುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ?
ಸರ್ಕಾರದ 60% ಕಮಿಷನ್ ದಂದೇ ಯಾವಾಗ ಬೀಗ ಹಾಕುತ್ತೀರಾ? ಕಾಂಗ್ರೆಸ್ ಶಾಸಕರು ಮತ್ತು ಪುಡಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ ಅಕ್ರಮಗಳಿಗೆ ಯಾವಾಗ ಬೇಗ ಹಾಕಿಸುತ್ತೀರಾ? ಎಂದು ಜೆಡಿಎಸ್ ಆಕ್ರೋಶ ಹೊರ ಹಾಕಿದೆ. ಕೈಲಾಗದವಾರು ಮೈ ಪರಚಿಕೊಂಡಂತೆ ಇದೆ ಈ ಸರ್ಕಾರದ ದುರಾಡಳಿತ ಎಂದು ಜೆಡಿಎಸ್ ಆಕ್ರೋಶ ಅವರ ಹಾಕಿದೆ.
ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೇ.. ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ?
ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ? ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ?
ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಹೈಕಮಾಂಡ್’ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ? ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ? ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್
ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ.
ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ @siddaramaiah, ಡಿಸಿಎಂ @DKShivakumar ಅವರೇ..
ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ
ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ?…— Janata Dal Secular (@JanataDal_S) October 8, 2025