ಬೆಳಗಾವಿ : ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯತಿಂದ್ರ ಅವರನ್ನು ಕರೆದು ಈ ಕುರಿತು ಮಾತನಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಮಾಧ್ಯಮಗಳು ಈ ಹಿಂದೆ ಸಿಎಂ ವಿಚಾರವಾಗಿ ಮಾತನಾಡಿದ ಶಾಸಕರಿಗೆ ನೋಟಿಸ್ ಕೊಟ್ಟಿದ್ದೀರಿ ಈಗ ಯತೀಂದ್ರ ಅವರು ಮಾತನಾಡಿದ್ದಾರೆ ಅವರಿಗೂ ನೋಟಿಸ್ ಕೊಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನಾನು ಯತೀಂದ್ರ ಅವರ ಹತ್ತಿರ ಮಾತನಾಡುತ್ತೇನೆ ಹೈಕಮಾಂಡ್ ಕರೆದಿದ್ದು ಮಾತನಾಡಿದ್ದು ಬಹಿರಂಗಪಡಿಸಲು ಆಗಲ್ಲ ಎಂದರು.
ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅವರು ಏನು ಹೇಳಿಕೆ ಕೊಟ್ಟಿದ್ದಾರೆ ನನಗೆ ಅರ್ಥ ಆಗಿಲ್ಲ. ಹೈಕಮಾಂಡ್ ಯಾವಾಗ ಕರೀತಾರೆ ನನ್ನ ಹತ್ರ ಮಾತಾಡೋದು ಯಾವುದನ್ನು ಬಹಿರಂಗಪಡಿಸುವುದಿಲ್ಲ. ಹಾಗಾಗಿ ಯತೀಂದ್ರ ಅವರನ್ನು ಕರೆದು ಅವರ ಜೊತೆಗೆ ಮಾತನಾಡುತ್ತೇನೆ ಎಂದು ತಿಳಿಸಿದರು.
ಯತೀಂದ್ರ ಹೇಳಿದ್ದೇನು?
ನಿನ್ನೆ ಯತೀಂದ್ರ ಸಿದ್ದರಾಮಯ್ಯ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹೈಕಮಾಂಡ್ ಹೇಳಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮಾತಿಗೆ ಬದ್ಧ ಅಂತ ಹೇಳಿದ್ದಾರೆ ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಸ್ತುತ ಎಂದು ತಿಳಿಸಿದರು. ಇವರ ಈ ಒಂದು ಹೇಳಿಕೆಗೆ ಕಾಂಗ್ರೆಸ್ ಪಕ್ಷದಲ್ಲಿ ಹಲವು ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ HC ಬಾಲಕೃಷ್ಣ ಅವರು ಯತೀಂದ್ರ ಹೇಳಿಕೆಗೆ ಕಿಡಿ ಕಾರಿದ್ದಾರೆ.








