ಬೆಂಗಳೂರು: ನಗರದಲ್ಲಿ ಪೌರ ಕಾರ್ಮಿಕರ ಸೇವೆ ಖಾಯಂ ಮಾಡಿಕೊಳ್ಳುವುದಾಗಿ ಸರ್ಕಾರ ಘೋಷಣೆ ಮಾಡಲಾಗಿತ್ತು. ಇಂತಹ ಪೌರ ಕಾರ್ಮಿಕರ ಸೇವೆ ಕಾಯಂ ಮಾಡುವ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಕೆಲವೊಂದು ಪ್ರಕ್ರಿಯೆಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು ವಿವರಣೆ ಕೇಳಿದ್ದರು. ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ:
ವಸಂತನಗರ 6ನೇ ಮುಖ್ಯ ರಸ್ತೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲಿಸಿ, ಗುಣಮಟ್ಟವನ್ನು ಕಾಪಾಡಿಕೊಂಡು ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಲಮಿತಿಯೊಳಾಗಿ ರಸ್ತೆ ಗುಂಡಿ ಮುಚ್ಚದಿದ್ದರೆ ಅಮಾನತು:
ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು. ಇಲ್ಲವಾದಲ್ಲಿ ಸಂಬಂಧ ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಅಮಾನತು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
IAF ವಿಂಗ್ ಕಮಾಂಡರ್ ವಿರುದ್ಧ ಮಹಿಳಾ ಫ್ಲೈಯಿಂಗ್ ಆಫೀಸರ್ ಅತ್ಯಾಚಾರ ಆರೋಪ: FIR ದಾಖಲು | IAF Wing Commander
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!